spot_img
Wednesday, April 1, 2026
spot_img

ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ ಎಂದು ಅವರು ಹೇಳಿದರು.

ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದು ಹೇಳಿದರು.

ರಾಜಭವನವನ್ನು ಬಳಸಿಕೊಂಡು  ರಾಜ್ಯ ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಬಿಜೆಪಿ (BJP) ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ  ಹೋರಾಡುತ್ತೇನೆ ಎಂದು ಹೇಳಿದರು.

ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!