spot_img
Wednesday, February 19, 2025
spot_img

ರಕ್ಷಾ ಬಂಧನ: ಸಂಸದರು ಹಾಗೂ ಶಾಸಕರಿಗೆ ರಕ್ಷೆ ಕಟ್ಟಿದ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಸಹೋದರ-ಸಹೋದರಿಯ ನಡುವಿನ ಬಾಂಧವ್ಯದ ಮಹತ್ವ ಸಾರುವ ರಕ್ಷಾ ಬಂಧನವನ್ನು ಆಚರಿಸಲಾಯಿತು.

ಇಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿಯವರ ಕಚೇರಿಗೆ ಭೇಟಿ ನೀಡಿ ರಕ್ಷಾಬಂಧನವನ್ನು ಕಟ್ಟಿದರು.

ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ, ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಹಾಗೂ ಕುಂದಾಪುರ ಮಂಡಲದ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, , ಸುಧೀರ್.ಕೆ.ಎಸ್., ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ, ಹಾಗೂ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾ, ಪಕ್ಷದ ವಿವಿಧ ಪದಾಧಿಕಾರಿಗಳು, ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!