Monday, September 9, 2024

ದುರ್ಬಲರ ಪಾಲಿನ ಆಶಾಕಿರಣ ಅರಸು- ಶಾಸಕ ಕಿರಣ್ ಕುಮಾರ್ ಕೊಡ್ಗಿ | ಡಿ. ದೇವರಾಜ್ ಅರಸುರವರ 109ನೇ ಜನ್ಮದಿನಾಚರಣೆ

ಕುಂದಾಪುರ, ಆ.20: ರಾಷ್ಟ್ರ ಕಂಡ ಮಹಾನ್ ಮುತ್ಸದ್ದಿ ರಾಜಕಾರಣಿಗಳಲ್ಲಿ ಡಿ ದೇವರಾಜ್ ಅರಸ್ ಪ್ರಮುಖರಾಗಿ ಗುರುತಿಸಲ್ಪಡುತ್ತಾರೆ. ೧೯೬೯ ರಿಂದ ೭೯ರ ದಶಕದಲ್ಲಿ ಅರಸು ಯುಗ ಎಂದು ಹೇಳುವುದು ವಾಡಿಕೆಯಾಗಿದೆ. ದುರ್ಬಲ ಮತ್ತು ಹಿಂದುಳಿದ ವರ್ಗಗಳಿಗೆ ಉಚಿತ ನಿವೇಶನ ಮತ್ತು ಕಡಿಮೆ ವೆಚ್ಚದ ಮನೆ ನಿರ್ಮಾಣದ ಯೋಜನೆ, ಭಾಗ್ಯಜ್ಯೋತಿಯ ಯೋಜನೆ ಮೂಲಕ ದುರ್ಬಲರ ಮನೆಗೆ ದೀಪ ಬೆಳಗಿಸಿದವರು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜ್ ಅರಸುರವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟೆಹೊಳೆ ಅವರು, ಡಿ ದೇವರಾಜ್ ಅರಸು ಪರಿವರ್ತನೆಗೆ ಕಾರಣರಾದವರು. ಅವರು ಜ್ಯಾರಿಗೆ ತಂದ ಯೋಜನೆಗಳು ಇಂದಿಗೂ ಪ್ರಸ್ತುತ. ಹಿಂದುಳಿದ ವರ್ಗಗಳ ಪಾಲಿಗೆ ಅವರು ಆಶಾಕಿರಣವಾಗಿದ್ದರು. ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಅವರ ಸಾಧನೆಗಳನ್ನು ನೆನಪಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಪ್ರಶಾಂತ್ ನೀಲಾವರ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ಮಹೇಶ್‌ಚಂದ್ರ, ತಹಶೀಲ್ದಾರ್ ಶೋಭಾಲಕ್ಷ್ಮಿ ಎಚ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕೆ.ಜಿ., ಪುರಸಭೆ ಮುಖ್ಯಾಧಿಕಾರಿ ಆನಂದ.ಜೆ., ಕುಂದಾಪುರ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಶಿಕಲಾ ಉಪಸ್ಥಿತರಿದ್ದರು.
ಸ್ವಾತಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!