spot_img
Wednesday, April 1, 2026
spot_img

ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಕುಂದಾಪುರ, ಆ.29: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿ ರೋವರ್‍ಸ್-ರೇಂಜರ್‍ಸ್ ಘಟಕದ ವತಿಯಿಂದ ಸದ್ಭಾವನಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ರವರು ವಹಿಸಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆಯನ್ನು ಬೋಧಿಸಿ, ಈ ದಿನಾಚರಣೆಯ ಮಹತ್ವದ ಬಗ್ಗೆ ಹಿತನುಡಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು ಮತ್ತು ಭಾರತದ ಪ್ರಜೆಗಳಾದ ನಾವು ಜಾತಿ, ಧರ್ಮ, ಪ್ರದೇಶ ಅಥವಾ ಭಾಷೆಯ ಭೇದ-ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂಬುದರ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಐಕ್ಯೂ‌ಎಸಿ ಸಂಚಾಲಕರಾದ ನಾಗರಾಜ ಯು ಹಾಗೂ ಗಣೇಶ ಪೈ, ನಾಗರಾಜ ವೈದ್ಯ ಎಂ., ರವಿಚಂದ್ರ ಹೆಚ್. ಎಸ್., ಡಾ. ಭಾಗೀರಥಿ ನಾಯ್ಕ ಉಪಸ್ಥಿತರಿದ್ದರು.

ರೇಂಜರ್ ಲೀಡರ್ ಡಾ. ಮುನಿರತ್ನಮ್ಮ ಎಲ್.ಎಂ. ಸ್ವಾಗತಿಸಿ, ವಿದ್ಯಾರ್ಥಿ ನಾಯಕರಾದ ರೋವರ್ ಗಣೇಶ, ರೇಂಜರ್ ಪರಿಣಿತ ಉಪಸ್ಥಿತರಿದ್ದರು. ನವ್ಯ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!