Monday, September 9, 2024

ಸಿಎಂ ವಿರುದ್ಧ ತನಿಖೆಗೆ ಅನುಮತಿ : ರಾಜ್ಯಪಾಲರ ವಿರುದ್ಧ ಪಂಜಿನ ಮೆರವಣಿಗೆ | 27ಕ್ಕೆ ರಾಜಭವನ ಚಲೋ

ಜನಪ್ರತಿನಿಧಿ (ಬೆಂಗಳೂರು) : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿದ್ಯಾರ್ಥಿ ಘಟಕವು ಪಂಜಿನ ಮೆರವಣಿಗೆಗೆ ಕರೆ ನೀಡಿದೆ.

ಬೆಂಗಳೂರಿನ ಗಾಂಧಿ ನಗರದ ಮೌರ್ಯ ವೃತ್ತದಲ್ಲಿ ನಾಳೆ(ಬುಧವಾರ) ಸಂಜೆ ಆರು ಗಂಟೆಗೆ ಪಂಜಿನ ಮೆರವಣಿಗೆ ಪ್ರಾರಂಭಗೊಳ್ಳಲಿದೆ. ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಹೊರ ಜಿಲ್ಲೆಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೇರಿದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ಮಾಡುತ್ತಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ತಾಳಕ್ಕೆ ಕುಣಿದರೆ, ಗೋ ಬ್ಯಾಕ್‌ ಗವರ್ನರ್‌ ಚಳವಳಿ ಆರಂಭಿಸಬೇಕಾಗುತ್ತದೆ ಎಂದು ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಜಿ,ಕೆ ಹೇಳಿದರು.

27ಕ್ಕೆ ರಾಜಭವನ ಚಲೋ :
ದಲಿತರು, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಪರವಾಗಿ ಸದಾ ನಿಲ್ಲುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಇದಕ್ಕಾಗಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಇದನ್ನು ಖಂಡಿಸಿ, ಇದೇ ಬರುವ 27ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ. ಎಂದು ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್‌ ಹೇಳಿದ್ದಾರೆ.

ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ ರಾಮಚಂದ್ರಪ್ಪ, ಜಾತ್ಯತೀತರು ಎಂದು ಹೇಳಿಕೊಳ್ಳುವ ಆದರೇ, ಕಡು ಜಾತಿವಾದಿಗಳಾದ ಎಚ್‌ ಡಿ ಕುಮಾರಸ್ವಾಮಿ ಹಾಗೂ ಹೆಚ್‌ ಡಿ ದೇವೇಗೌಡರು ದೆಹಲಿಗೆ ಹೋಗಿ, ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!