Monday, September 9, 2024

ಇಂಡಿಯನ್‌ ಬ್ಯಾಂಕ್‌ ನಲ್ಲಿ ಉದ್ಯೋಗವಕಾಶ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ : ಇಂಡಿಯನ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 300 ಲೋಕಲ್‌ ಬ್ಯಾಂಕ್‌ ಆಫೀಸರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್‌ 2, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ‌

ವಿದ್ಯಾರ್ಹತೆ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 48480 ರಿಂದ ರೂ. 85920 ಸಂಬಳ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌, ಆಂಧ್ರ ಪ್ರದೇಶ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: 175 ರೂ.
ಇತರೆ ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಆನ್‌ಲೈನ್‌ ಟೆಸ್ಟ್
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸುಲಭವಾಗಲೆಂದೇ ಈ ಕೆಳಗೆ ನೇರ ಲಿಂಕ್‌ ಅನ್ನು ನೀಡಿದ್ದೇವೆ. ಲಿಂಕ್‌ ಪ್ರವೇಶಿಸುವುದರ ಮೂಲಕ ನೀವು ಈ ಮೇಲೆ ಉಲ್ಲೇಖಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Recruitment of Local Bank Officers – 2024

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!