Monday, September 9, 2024

ಹೆಚ್‌ಡಿಕೆ ಅವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್‌ ಡಿ ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು? ಎಂದು ಅವರು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!