spot_img
Monday, January 19, 2026
spot_img

‌ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ : ಆರೋಪಿ ಮೋಹನ್‌ ನಾಯಕ್‌ಗೆ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು/ನವ ದೆಹಲಿ) : ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಆರೋಪಿ ಮೋಹನ್‌ ನಾಯಕ್‌ಗೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನು ರದ್ದು ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಸಿದೆ ಎಂದು ಬಾರ್‌ ಅಂಡ್‌ ವೆಂಚ್‌ ವರದಿ ಮಾಡಿದೆ.

ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌ ನಿರ್ಧಾರವನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಸತೀಶ್‌ ಚಂದ್ರ ಶರ್ಮಾ ಅವರದಿದ್ದ ನ್ಯಾಯಪೀಠ ಎತ್ತಿಹಿಡಿಯಿತು. ಆರೋಪಿ ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಹೇಳಿದೆ.

೨೦೨೩ರ ಡಿಸೆಂಬರ್‌ ನಲ್ಲಿ ಮೋಹನ್‌ ನಾಯಕ್‌ಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು.

ಕರ್ನಾಟಕ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಇದಕ್ಕೆ ಕರ್ನಾಟಕ ಸರ್ಕಾರದಿಂದ ಕೋರ್ಟ್‌ ವಿವರಣೆ ಬಯಸಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!