spot_img
Wednesday, January 22, 2025
spot_img

ವಕ್ವಾಡಿ : ಮಾರಕಾಯುಧಗಳಿಂದ ಹಲ್ಲೆ : ಆರೋಪಿಗಳನ್ನು ರಕ್ಷಿಸುವುದಕ್ಕೆ ರಾಜಕೀಯ ಪ್ರಭಾವ ಬಳಸುತ್ತಿರುವುದನ್ನು ಜಿಲ್ಲಾ ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತದೆ : ವಿಕಾಸ್‌ ಹೆಗ್ಡೆ

ಜನಪ್ರತಿನಿಧಿ (ಕುಂದಾಪುರ/ಉಡುಪಿ) : ವಕ್ವಾಡಿಯಂತಹ ಗ್ರಾಮೀಣ ಭಾಗದಲ್ಲಿ ಇತ್ತೀಚೆಗೆ ನಡೆದಿರುವ ಮಾರಣಾಂತಿಕ ಹಲ್ಲೇ ನಿಜಕ್ಕೂ ಆತಂಕಕಾರಿಯಾಗಿದೆ. ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಆರೋಪಿಗಳು ಗಾಂಜಾ ವ್ಯಸನಿಗಳು ಎಂಬ ಮಾತುಗಳನ್ನು ಆ ಭಾಗದ ಸಾರ್ವಜನಿಕರು ಹೇಳುತ್ತಾರೆ. ಇದು ಪೊಲೀಸರಿಗೆ ಗೊತ್ತಿರದ ವಿಷಯವೇನಲ್ಲ. ಆರೋಪಿಗಳಲ್ಲಿ ಕೆಲವರು ಈ ಹಿಂದೆಯೂ ಗಾಂಜಾ, ಗಲಾಟೆ ಪ್ರಕರಣಗಳಲ್ಲಿ ಪೊಲೀಸ್‌ ಬಲೆಗೆ ಸಿಕ್ಕವರೇ ಆಗಿದ್ದಾರೆ. ಪೊಲೀಸರು ಮನಸ್ಸು ಮಾಡಿದರೇ, ತಂತ್ರಜ್ಞಾನದ ಮೂಲಕ ತಪ್ಪಿಸಿಕೊಂಡ ಆರೋಪಿಗಳನ್ನು ಬಂಧಿಸಿ ಶಿಕ್ಷೆ ನೀಡುವುದು ದೊಡ್ಡ ವಿಷಯವೇ ಅಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಈ ನಡುವೆ ಆರೋಪಿಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಕೆಲವರು ರಾಜಕೀಯ ಪ್ರಭಾವ ಬಳಸುತ್ತಿದ್ದಾರೆ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಯಾರೇ ಆಗಲಿ ಇಂತಹ ದುಷ್ಕರ್ಮಿಗಳನ್ನು ಬೆಂಬಲಿಸುವುದು, ರಕ್ಷಿಸುವುದನ್ನು ಮಾಡಬಾರದು. ಇಂತಹ ಬೆಳವಣಿಗೆಯನ್ನು ಜಿಲ್ಲಾ ಕಾಂಗ್ರೆಸ್‌ ತೀವ್ರವಾಗಿ ಖಂಡಿಸುತ್ತದೆ. ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ. ಪೊಲೀಸರು ಯಾವ ರಾಜಕೀಯ ಪ್ರಭಾವಕ್ಕೂ ಒಳಗಾಗವುದಿಲ್ಲ ಎಂಬ ವಿಶ್ವಾಸವಿದೆ. ಆ ವಿಶ್ವಾಸವನ್ನು ಪೊಲೀಸರು ಉಳಿಸಿಕೊಳ್ಳುತ್ತಾರೆಂಬ ನಂಬಿಕೆಯೂ ಇದೆ. ತಪ್ಪಿಸಿಕೊಂಡ ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸಿ, ಸೂಕ್ತ ಶಿಕ್ಷೆ ಒದಗಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇನ್ನು, ಕುಂದಾಪುರ ಸೇರಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಗಾಂಜಾ ವಹಿವಾಟು ನಿರಂತರವಾಗಿ ನಡೆಯುತ್ತಿದೆ. ಪೊಲೀಸ್ ಇಲಾಖೆ ಮನಸ್ಸು ಮಾಡಿದರೆ ಗಾಂಜಾ ಹತೋಟಿಗೆ ತರುವುದು ದೊಡ್ಡ ವಿಷಯವೇ ಅಲ್ಲಾ. ಎಷ್ಟೋ ಮಂದಿ ಕಾಲೇಜು ವಿದ್ಯಾರ್ಥಿಗಳು, ಯುವ ಜನತೆ ಇಂದು ಗಾಂಜಾ ವ್ಯಸನಿಗಳಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಅಲ್ಲದೇ ಸಮಾಜಘಾತುಕರಾಗಿ ಬದಲಾಗುತ್ತಿದ್ದಾರೆ. ಪೊಲೀಸ್ ಇಲಾಖೆ ಗಾಂಜಾ ವ್ಯಸನಿಗಳ ಮೇಲೆ ಕ್ರಮ ಕೈಗೊಳ್ಳುವುದರ ಜೊತೆಗೆ ಅತೀ ಮುಖ್ಯವಾಗಿ ಮಾಡಬೇಕಾದ ಕೆಲಸ ಗಾಂಜಾ ಪೆಡ್ಲರ್‌ ಗಳ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಆಗ ಮಾತ್ರ ಇದು ನಿಯಂತ್ರಣಕ್ಕೆ ಬರಲು ಸಾಧ್ಯ ಎಂದು ಹೇಳಿದ್ದಾರೆ.

ಗಾಂಜಾ ಇವತ್ತು ಎಲ್ಲೆಡೆಯಲ್ಲಿ ಯುವಕರಿಗೆ, ವಿದ್ಯಾರ್ಥಿಗಳಿಗೆ ಸಿಗಲು ಕಾರಣ ಗಾಂಜಾ ಪೆಡ್ಲರ್‌ ಗಳ ಮೇಲೆ ಕಠಿಣ ಕ್ರಮವಾಗದೆ ಇರುವುದು. ಪೊಲೀಸ್ ಇಲಾಖೆ ಇಂತಹ ಗಾಂಜಾ ಪೆಡ್ಲರ್ ಗಳನ್ನು ಪತ್ತೆಹಚ್ಚಿ ಅವರುಗಳ ಮೇಲೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು. ಹೆತ್ತವರು ಕೂಡ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾವಹಿಸಬೇಕು, ಏನಾದರೂ ಅನುಮಾನ ಕಂಡರೆ ಸಂಬಂಧಿತರಿಗೆ ಕೂಡಲೇ ಮಾಹಿತಿ ಕೊಡಬೇಕು. ಗಾಂಜಾದಂತಹ ಸಾಮಾಜಿಕ ಪಿಡುಗನ್ನು ಹೋಗಲಾಡಿಸಲು ಇಡೀ ವ್ಯವಸ್ಥೆ ಇದರ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇಂತಹ ದುಷ್ಕೃತ್ಯಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಅತ್ಯಂತ ಅಗತ್ಯವಾದುದು. ಪೊಲೀಸ್‌ ಇಲಾಖೆ ಈ ಬಗ್ಗೆ ಜನಜಾಗೃತಿ ಮೂಡಿಸಲಿ, ರಾತ್ರಿ ವೇಳೆ ಇಂತಹ ಚಟುವಟಿಕೆಗಳು ಹೆಚ್ಚು ನಡೆಯುವ ಪ್ರದೇಶಗಳಲ್ಲಿ ಹೆಚ್ಚು ಗಸ್ತು ಮಾಡಿ ಸುರಕ್ಷಿತ ಜನಜೀವನಕ್ಕೆ ಸಹಾಯ ಮಾಡಲಿ. ಇಂತಹ ವಿಚಾರಗಳಲ್ಲಿ ಯಾವ ಜನಪ್ರತಿನಿದಿನಗಳು ಹಾಗೂ ರಾಜಕಾರಣಿಗಳು ಪೊಲೀಸ್ ಇಲಾಖೆಗೆ ಆರೋಪಿಗಳ ಪರವಾಗಿ ವಕಾಲತ್ತು ಮಾಡಬಾರದು ಎಂದು ವಿಕಾಸ್‌ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!