Monday, September 9, 2024

ವಕ್ವಾಡಿ : ಮಾರಕಾಯುಧಗಳಿಂದ ಹಲ್ಲೆ | ಸಮಾಜ ಘಾತುಕ ಚಟುವಟಿಕೆಗಳನ್ನು ಪೊಲೀಸ್‌ ಇಲಾಖೆ ತಡೆಗಟ್ಟಲಿ : ಕಿಶೋರ್‌ ಕುಮಾರ್‌ ಕುಂದಾಪುರ

ಜನಪ್ರತಿನಿಧಿ (ಕುಂದಾಪುರ/ ಉಡುಪಿ) : ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿ ನಡೆದಿರುವ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಈ ಕಾರಣದಿಂದಾಗಿ ಜನರು ಭಯದಿಂದ ಬದುಕುವ ಪರಿಸ್ಥಿತಿ ಬಂದೊದಗಿದೆ. ಇಂತಹ ಘಟನೆಯನ್ನು ಜಿಲ್ಲಾ ಬಿಜೆಪಿ ಸಹಿಸುವುದಿಲ್ಲ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್ ಕುಂದಾಪುರ ಹೇಳಿದ್ದಾರೆ. ‌

ಇಂತಹ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಗಾಂಜಾ ವಹಿವಾಟು ಈ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ. ಗಾಂಜಾ ಹಾವಳಿ ತಡೆಗಟ್ಟುವಲ್ಲಿ ಪೊಲೀಸ್‌ ಇಲಾಖೆ ಕಾರ್ಯನಿರ್ವಹಿಸಲಿ. ಇಂತಹ ಕಾನೂನು ಬಾಹೀರ ಚಟುವಟಿಕೆಗಳ ಹಿಂದೆ ಯಾರಿದ್ದಾರೆ ಎಂದು ಬಯಲಿಗೆಳೆದು ಅಂತವರಿಗೆ ತಕ್ಕ ಶಿಕ್ಷೆ ನೀಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಆರೋಪಿಗಳು ಯಾರೇ ಆಗಲಿ, ಶೀಘ್ರದಲ್ಲಿ ಅವರನ್ನು ಬಂಧಿಸಿ ಶಿಕ್ಷೆ ನೀಡಿ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಊರು ಊರುಗಳಲ್ಲಿ ಗಾಂಜಾ ವಹಿವಾಟು ರಾಜಾರೋಷವಾಗಿ ನಡೆಯುತ್ತಿದೆ. ಇಂತಹ ಸಮಾಜ ಘಾತುಕ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಇಲಾಖೆಯೊಂದಿಗೆ ಊರಿನವರು ಸಹಕಾರ ನೀಡಬೇಕಿದೆ. ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು ಯಾರೇ ಆಗಲಿ ಅವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಅವರು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಬೇಕು. ನಿಷೇಧಿತ ಅಮಲು ಪದಾರ್ಥ ಸೇವನೆ ಸಹಿತ ಇತರೆ ಸಮಾಜ ಘಾತುಕ ಚಟುವಟಿಕೆಗಳನ್ನು ಪೊಲೀಸ್‌ ಇಲಾಖೆ ನಿಯಂತ್ರಿಸಲಿ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!