Wednesday, September 11, 2024

ಸುಪ್ರೀಂ ಮನವಿಗೆ AIIMS ಶರಣು | 11 ದಿನಗಳ ಮುಷ್ಕರ ವಾಪಾಸ್‌ !

ಜನಪ್ರತಿನಿಧಿ (ನವದೆಹಲಿ) : ಪಶ್ಚಿಮ ಬಂಗಾಳದ ಕೋಲ್ಕತ್ತದ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಸುಪ್ರೀಂಕೋರ್ಟ್ ಮನವಿ ಮಾಡಿದ ಬಳಿಕ ನವದೆಹಲಿಯ ಏಮ್ಸ್ ನ ಸ್ಥಾನಿಕ ಡಾಕ್ಟರ್ ಅಸೋಸಿಯೇಷನ್ ನಡೆಸುತ್ತಿದ್ದ 11 ದಿನಗಳ ಮುಷ್ಕರವನ್ನು ಹಿಂತೆಗೆದುಕೊಂಡಿದೆ.

ಸುಪ್ರೀಂ ಕೋರ್ಟ್‌ನ ಮನವಿ ಹಾಗೂ ನಿರ್ದೇಶನಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವೈದ್ಯರ ಅಸೋಸಿಯೇಷನ್ ಹೇಳಿಕೆಯಲ್ಲಿ ತಿಳಿಸಿದೆ. ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಜನಿಕ ಸೇವೆ ಹಿನ್ನೆಲೆಯಲ್ಲಿ AIIMSನ ವೈದ್ಯರ ಸಂಘ 11 ದಿನಗಳ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ.

ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಘಟನೆ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಮತ್ತು ದೇಶಾದ್ಯಂತ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಭದ್ರತೆಯ ಸಮಸ್ಯೆಯನ್ನು ಪರಿಹರಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್‌ಗೆ ಪ್ರಾಮಾಣಿಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇವೆ ಎಂದು ಅಸೋಸಿಯೇಷನ್ ಮಾಹಿತಿ ನೀಡಿದೆ.

ಪ್ರತಿಭಟನಾಕಾರರು ಕಳವಳಗಳನ್ನು ಪರಿಹರಿಸಲು ಸುಪ್ರೀಂಕೋರ್ಟ್ ನಿಂದ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಲು ಸಂಘವು ಒಪ್ಪಿಕೊಂಡಿದೆ. ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳನ್ನು ಬಲವಾಗಿ ಒತ್ತಾಯಿಸುವುದಾಗಿ ಹೇಳಿದೆ. ಪ್ರತಿಭಟನಾನಿರತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ವೈದ್ಯರ ಮಂಡಳಿ ಶ್ಲಾಘಿಸಿದೆ.

ಸುರಕ್ಷತಾ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವವರೆಗೆ ಕೆಲಸದ ಸಮಯದ ಬಳಿಕ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಸಂಘ ಹೇಳಿದೆ. “ರೋಗಿಗಳ ಆರೈಕೆ” ನಮ್ಮ ಅತ್ಯಂತ ಆದ್ಯತೆಯಾಗಿದ್ದು, ಅದನ್ನು ಎತ್ತಿಹಿಡಿಯಲು ಸಮರ್ಪಿತರಾಗಿದ್ದೇವೆ. ನಮ್ಮ ಧ್ಯೇಯದಲ್ಲಿ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ. ನ್ಯಾಯ ಸಿಗುವವರೆಗೆ ಹಾಗೂ ಸುರಕ್ಷತಾ ಮಾರ್ಗಸೂಚಿಗಳ ಅನುಷ್ಠಾನದವರೆಗೆ ನಾವು ಸಾಂಕೇತಿಕ ಪ್ರತಿಭಟನೆಯ ಮೂಲಕ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅದು ಹೇಳಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!