spot_img
Saturday, February 14, 2026
spot_img

ಕೊಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ : FIR ದಾಖಲು ವಿಳಂಬ, ಮರಣೋತ್ತರ ಪರೀಕ್ಷೆ ವಿಧಾನ ಬಗ್ಗೆ ಸುಪ್ರೀಂ ಸಂದೇಹ!

ಜನಪ್ರತಿನಿಧಿ (ನವದೆಹಲಿ) : ವೈದ್ಯರ ತೀವ್ರ ಪ್ರತಿಭಟನೆಗೆ ಕಾರಣವಾಗಿರುವ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು(ಗುರುವಾರ) ಆರಂಭಿಸಿದ್ದು, ಸಿಬಿಐ ಹಾಗೂ ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿರುವ ವಿಚಾರಣೆಯ ಸ್ಥಿತಿ ವರದಿಯನ್ನು ಪರಿಶೀಲಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಎಫ್‌ಐಆರ್ ದಾಖಲಿಸುವಲ್ಲಿನ ವಿಳಂಬವಾಗಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ.

ಸಿಬಿಐ ವರದಿಯಲ್ಲಿ ಏನಿದೆ?: ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ಬಳಿಕ ರಾತ್ರಿ 11:45 ಕ್ಕೆ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ಈ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯ ಬಗ್ಗೆ ನ್ಯಾಯಾಲಯ ಪ್ರಶ್ನೆಸಿದೆ. ಆರಂಭದಲ್ಲಿ, ರಾಜ್ಯ ಪೊಲೀಸರು ಸಂತ್ರಸ್ತೆಯ ಪೋಷಕರಿಗೆ ಇದು ಆತ್ಮಹತ್ಯೆ ಎಂದು ತಿಳಿಸಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ವರದಿ ಮಾಡಿದೆ. ನಂತರವೇ ಪೊಲೀಸರು ಇದೊಂದು ಕೊಲೆ ಎಂದು ಒಪ್ಪಿಕೊಂಡಿದ್ದಾರೆ. ಸಂತ್ರಸ್ತೆಯ ಸ್ನೇಹಿತನು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾನೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದ್ದು, ನಂತರದ ಬೆಳವಣಿಗೆಯ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ವೀಡಿಯೊಗ್ರಫಿಗೆ ಸಿಬಿಐ ಒತ್ತಾಯಿಸಿದೆ.

ಪೊಲೀಸರು ಹೇಳುವುದೇನು?: ಘಟನೆಯನ್ನು ಮೊದಲು ದಾಖಲಿಸಿದ ಕೋಲ್ಕತ್ತಾ ಪೊಲೀಸ್ ಅಧಿಕಾರಿಗೆ ತಾವು ಪ್ರವೇಶಿಸಿದ ಸಮಯವನ್ನು ವಿವರಿಸಲು ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಕರಣವನ್ನು ಅಧಿಕೃತವಾಗಿ ಅಸಹಜ ಸಾವು ಎಂದು ದಾಖಲಿಸುವ ಮೊದಲು ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು ಎಂದು ಇಲ್ಲಿ ಉಲ್ಲೇಖಿಸಲಾಗಿದೆ, ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ನ್ಯಾಯಾಲಯವು ತೀವ್ರ ಗೊಂದಲವುಂಟುಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಘಟನೆಯ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಸುಪ್ರೀಂ ಕೋರ್ಟ್ ಕರ್ತವ್ಯಕ್ಕೆ ಹಾಜರಾಗುವಂತೆ ಮತ್ತು ಕೆಲಸದ ಸ್ಥಳದಲ್ಲಿ ಭದ್ರತೆ ನೀಡುವುದಾಗಿ ಯಾವುದೇ ಶಿಸ್ತುಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದೆ.

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಇಂದು ಆರಂಭಿಸಿತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!