spot_img
Wednesday, April 1, 2026
spot_img

ಶಿರೂರು ಗುಡ್ಡ ಕುಸಿತ : ಸಂತ್ರಸ್ತರಿಗೆ ಪರಿಹಾರ ಒದಗಿಸಲು ಪ್ರಧಾನಿ ಒಪ್ಪಿಗೆ

ಜನಪ್ರತಿನಿಧಿ (ಬೆಂಗಳೂರು) : ಶಿರೂರು ಗುಡ್ಡ ಕುಸಿತದ ಸಂತ್ರಸ್ತರಿಗೆ ಪರಿಹಾಗ ಒದಗಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಶಿರೂರು ಗುಡ್ಡ ಕುಸಿತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಕೋರಿ ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ದೊಡ್ಡ ಪ್ರಮಾಣದ ಮಳೆಯಿಂದಾಗಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ವಿಶೇಷ ಅನುದಾನ ನೀಡಬೇಕು ಎಂದು ಕೋರಿ ನೀವು ಬರೆದ ಪತ್ರ ತಲುಪಿದೆ. ವಿಶೇಷ ಅನುದಾನ ರೂಪದಲ್ಲಿ ಪರಿಹಾರ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಮಾತ್ರವಲ್ಲದೇ, ನಮ್ಮ ಸರ್ಕಾರದಿಂದ ಎಲ್ಲಾ ಬೆಂಬಲ ದೊರಕಲಿದೆ. ಘಟನೆಯಿಂದ ಭಾದಿತರಾದವರ ಜೊತೆ ನನ್ನ ಪ್ರಾರ್ಥನೆ ಇರಲಿದೆ ಎಂದೂ ಕೂಡ ಪತ್ರದಲ್ಲಿ ಪ್ರಧಾನಿ ಉಲ್ಲೇಖಿಸಿದ್ದಾರೆ.

ಪರಿಹಾರ ಒದಗಿಸಲು ಪ್ರಧಾನಿ ಒಪ್ಪಿದ್ದು, ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಹಾರ ಮೊತ್ತ ನಿಗದಿ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಪ್ರಧಾನಿ ಒಪ್ಪಿಗೆಯ ಪತ್ರ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!