Monday, September 9, 2024

ಆ.25ಕ್ಕೆ ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕುಂದಾಪುರ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆಗಸ್ಟ್ 25 ಆದಿತ್ಯವಾರ ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ.
ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಗೇಶ್ ಹಳ್ನಾಡು, ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಮಾಧವ ಕುಂದಾಪುರ ಹಾಗೂ ಪದಾಧಿಕಾರಿಗಳು ಪದಪ್ರದಾನ ಸ್ವೀಕರಿಸಲಿದ್ದಾರೆ.

ಬೆಳಿಗ್ಗೆ 8.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 11 ಗಂಟೆಗೆ ಸಭಾ ಕಾರ್ಯಕ್ರಮ, ಮಧ್ಯಾಹ್ನ1 ಗಂಟೆಗೆ ಅನ್ನಸಂತರ್ಪಣೆ, ಮಧ್ಯಾಹ್ನ 2 ಗಂಟೆಯಿಂದ ಕನಸು ಮ್ಯೂಸಿಕಲ್ ಕುಂದಾಪುರ ಇವರಿಂದ ಸಂಗೀತ ರಸಮಂಜರಿ, ಸಿನಿಮಾ ನೃತ್ಯ, ಫನ್ನಿ ಗೇಮ್ಸ್ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಸಭಾ ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದಾರೆ. ಮೊಗವೀರ ಯುವ ಸಂಘಟನೆಯ ಕುಂದಾಪುರ ಘಟಕದ ಅಧ್ಯಕ್ಷರಾದ ಚಂದ್ರಹಾಸ ಕೋಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಅಧ್ಯಕ್ಷ ಜಯಂತ್ ಅಮೀನ್ ಕೋಡಿ, ಗೀತಾನಂದ ಫೌಂಡೇಶನ್ ಕೋಟ ಮಣೂರು ಇದರ ಪ್ರವರ್ತಕರಾದ ಆನಂದ ಸಿ.ಕುಂದರ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬೈ ಇದರ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ, ದ,ಕ ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷರಾದ ಜಯ ಸಿ.ಕೋಟ್ಯಾನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ನಿಕಟಪೂರ್ವ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ಕುಂದಾಪುರ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರ ಮರಕಾಲ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ಸಿ.ಸೌಕೂರು, ಮೊಗವೀರ ಯುವ ಸಂಘಟನೆ ಮಾಜಿ ಅಧ್ಯಕ್ಷರಾದ ಸದಾನಂದ ಬಳ್ಕೂರು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ರಾಮ ನಾಯ್ಕ ಗುಜ್ಜಾಡಿ, ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ ಗೌರವಾಧ್ಯಕ್ಷರಾದ ಗಣೇಶ್ ಮೆಂಡನ್ ಭಾಗವಹಿಸಲಿದ್ದಾರೆ.

ಕುಂದಾಪುರ ಘಟಕದ ಅಧ್ಯಕ್ಷರಾದ ಚಂದ್ರಹಾಸ ಕೋಣಿ, ಕಾರ್ಯದರ್ಶಿ ಸಂತೋಷ ಮದ್ದುಗುಡ್ಡೆ, ನಿಯೋಜಿತ ಅಧ್ಯಕ್ಷರಾದ ನಾಗೇಶ್ ಹಳ್ನಾಡು, ನಿಯೋಜಿತ ಕಾರ್ಯದರ್ಶಿ ಮಾಧವ ಕುಂದಾಪುರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!