Monday, September 9, 2024

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಎಂ. ಕಾಂ. ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಆರಂಭ

ಕುಂದಾಪುರ: 2024-25ನೇ ಸಾಲಿನ ಎಂ. ಕಾಂ ಸ್ನಾತಕೋತ್ತರ ಪದವಿಯನ್ನು ಪಡೆಯ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿರುತ್ತದೆ. ಈ ಸಂಸ್ಥೆಯು ಸರ್ಕಾರಿ ಸಂಸ್ಥೆಯಾಗಿರುವುದರಿಂದ ಅತ್ಯಂತ ಕಡಿಮೆ ಶುಲ್ಕದಲ್ಲಿ ಮೌಲ್ಯಯುತವಾದ ಶಿಕ್ಷಣವನ್ನು ಪಡೆಯುವ ಸದಾವಕಾಶ ವಿದ್ಯಾರ್ಥಿಗಳಿಗೆ ಲಭ್ಯವಿದೆ.

ಪ್ರವೇಶಾತಿಗಾಗಿ ಈ ಕಾಲೇಜಿಗೆ ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) Portal ನಲ್ಲಿ ನೇರವಾಗಿ ಪ್ರಥಮ ಆಧ್ಯತೆಯ ಮೇರೆಗೆ ಈ ಕಾಲೇಜನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಈ ಕಾಲೇಜಿನ ಕಛೇರಿಗೆ ಖುದ್ದಾಗಿ ಬೇಟಿ ನೀಡಬಹುದು.

ಕಛೇರಿಯ ದೂರವಾಣಿ ಸಂಖ್ಯೆ: 08254 262190/ 08067914141 ಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ ವೆಬ್‌ಸೈಟ್ www.mangaloreuniversity.ac.in  ಸಂದರ್ಶಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!