Monday, September 9, 2024

ಸಹೋದ್ಯೋಗಿ ಮೇಲೆ ಲೈಂಗಿಕ ಕಿರುಕುಳ | ಕುಂದಾಪುರ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಪ್ರಕರಣ ಕೈ ಬಿಡಲು ಹೈಕೋರ್ಟ್‌ ನಕಾರ !

ಜನಪ್ರತಿನಿಧಿ (ಬೆಂಗಳೂರು) : ಸಿಬಂದಿಗೆ ಲೈಂಗಿಕವಾಗಿ ಹಿಂಸಿಸುವ ವೈದ್ಯಾಧಿಕಾರಿಯನ್ನು ಬಿಡುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ರಾಜ್ಯ ಹೈಕೋರ್ಟ್ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪದಲ್ಲಿ ಕುಂದಾಪುರ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ರಾಬರ್ಟ್ ರೆಬೆಲ್ಲೋ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್‌ ಪ್ರಕರಣವನ್ನು ಕೈ ಬಿಡಲು ಹೈಕೋರ್ಟ್ ನಿರಾಕರಣೆ ಮಾಡಿದೆ.

ಕುಂದಾಪುರ ಠಾಣಾ ಪೊಲೀಸರು ದಾಖಲಿಸಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಡಾ|ರಾಬರ್ಟ್‌ರೆಬೆಲ್ಲೋ ಸಲ್ಲಿಸಿದ್ದಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಕೋರ್ಟ್ ಮುಂದಿರುವ ದಾಖಲೆಗಳಿಂದ ಅರ್ಜಿದಾರನು ದೂರುದಾರ ವೈದ್ಯಗೆ ಕಿರುಕುಳ ನೀಡಿರುವುದು ತಿಳಿಯುತ್ತಿದೆ. ಈ ಹಂತದಲ್ಲಿ ಎಫ್‌ಐಆರ್, ರದ್ದುಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಲಿ. ಅನಂತರ ಆರೋಪಗಳನ್ನು ಕೈಬಿಡಲು ಕೋರಿ ಆರೋಪಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಹೇಳಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರ ವೈದ್ಯರ ಪರ ವಕೀಲರು ತಮ್ಮ ಅರ್ಜಿ ಹಿಂಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!