Wednesday, September 11, 2024

ಕಾರ್ಕಳ ಅತ್ಯಾಚಾರ ಪ್ರಕರಣ : ಅಪಹರಿಸಿ ಮದ್ಯದಲ್ಲಿ ಅಮಲು ಪದಾರ್ಥ ಸೇರಿಸಿ ಅತ್ಯಾಚಾರ ! : ಎಸ್‌ಪಿ ಹೇಳಿದ್ದೇನು ?

ಜನಪ್ರತಿನಿಧಿ (ಉಡುಪಿ) : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ವಿಡಿಯೋ ಹೇಳಿಕೆ ಮೂಲಕ ಮಾಹಿತಿ ನೀಡಿರುವ ಅವರು, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದಿರುವುದಾಗಿ ದೂರು ಬಂದಿದೆ ಎಂದು ತಿಳಿಸಿದ್ದಾರೆ.

ಎಸ್‌ಪಿ ಹೇಳಿದ್ದೇನು?
ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ನಿನ್ನೆ(ಶುಕ್ರವಾರ) ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಆತ ಕರೆದಲ್ಲಿಗೆ ಹೋದಾಗ ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದಾನೆ.

ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸವೇರಾ ರಿಚರ್ಡ್‌ ಕ್ವಾಡ್ರಸ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ.

ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!