spot_img
Saturday, February 14, 2026
spot_img

ವಕ್ವಾಡಿ ಸ.ಹಿ.ಪ್ರಾ. ಶಾಲೆ | ಸನ್ಮಾನ, ಕಪಾಟು ಹಾಗೂ ಸಹಾಯ ಹಸ್ತಾಂತರ ಕಾರ್ಯಕ್ರಮ

ಜನಪ್ರತಿನಿಧಿ (ವಕ್ವಾಡಿ) : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಕ್ವಾಡಿಯಲ್ಲಿ  ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಕುಂದಾಪುರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಲೆಯ ಹಳೆ ವಿದ್ಯಾರ್ಥಿ ಬಾಲಕೃಷ್ಣ ಶೆಟ್ಟಿ ವಕ್ವಾಡಿ ಅವರನ್ನು ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಗೆ 3 ಕಪಾಟು ಹಸ್ತಾಂತರಿಸಿದರು

ಮತ್ತು ರೋಟರಿ ಸಮುದಾಯ ದಳ ಕೊರವಡಿ ಕುಂಭಾಶಿ ಕಡೆಯಿಂದ ಶಾಲೆಗೆ 2 ಡೆಸ್ಕ್ ಗಳನ್ನು ಹಸ್ತಾಂತರಿಸಲಾಯಿತು.

ಶಾಲೆಗೆ ಕಪಾಟು ಹಸ್ತಾಂತರ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿಗಾರ್ ವಹಿಸಿದ್ದರು.

ನಿವೃತ್ತ ಮುಖ್ಯೋಪಾದ್ಯಾಯರಾದ ಕರುಣಾಕರ ಶೆಟ್ಟಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸತ್ಯರಂಜನ್ ಹೆಗ್ಡೆ, ಉಪಾಧ್ಯಕ್ಷ ಪುಟ್ಟರಾಜ್ ಹೆಬ್ಬಾರ್, ದಿನಕರ್ ಶೆಟ್ಟಿ ವಕ್ವಾಡಿ, ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಸದಾನಂದ ಶೆಟ್ಟಿ ವಕ್ವಾಡಿ, ರೋಟರಿ ಸಮುದಾಯ ದಳ ಕೊರವಡಿ ಕುಂಭಾಶಿಯ ಗೌರವ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ, ಅಧ್ಯಕ್ಷ ಸುರೇಶ್ ವಿಠಲವಾಡಿ, ಕಪಾಟು ದಾನಿಗಳಾದ ಉಮಾ ಪ್ರಶಾಂತ್ ಶೆಟ್ಟಿ, ಅನಿತಾ ನಾಗರಾಜ್ ಶೆಟ್ಟಿ, ಚಂದ್ರಾವಳಿ ಸತ್ಯರಂಜನ್ ಹೆಗ್ಡೆ, ಗ್ರಾಮ ಪಂಚಾಯತ್‌ ಸದಸ್ಯ ರಮೇಶ್‌ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಅನಿತಾ ಸ್ವಾಗತಿಸಿ, ಸಹ ಶಿಕ್ಷಕಿ ಲಕ್ಷ್ಮೀ ವಂದಿಸಿ, ಸುಲೇಖಾ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!