Monday, September 9, 2024

ಮೊಗವೀರ ಯುವ ಸಂಘಟನೆಯಿಂದ ಯುವಶಕ್ತಿ ಸದ್ಭಳಕೆ-ಆನಂದ್ ಸಿ ಕುಂದರ್

 ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ ನೂತನ ಪದಾಧಿಕಾರಿಗಳ ಪದಪ್ರದಾನ

ಕುಂದಾಪುರ, ಆ.25 (ಜನಪ್ರತಿನಿಧಿ ವಾರ್ತೆ) ಮೊಗವೀರ ಯುವ ಸಂಘಟನೆ ಯುವ ಸಮುದಾಯವನ್ನು ಸಂಘಟಿಸಿ ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವಂತೆ ಮಾಡಿದೆ. ಯುವಶಕ್ತಿಯ ಸದ್ಭಳಕೆ, ಜವಬ್ದಾರಿಯನ್ನು ನಿರ್ವಹಣೆಯ ಮೂಲಕ, ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ಕುಂದಾಪುರ ಘಟಕ ಗಮನ ಸಳೆದಿದೆ. ಮೊಗವೀರ ಯುವ ಸಮುದಾಯ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಮೂಲಕ ಮೊಗವೀರ ಯುವ ಸಂಘಟನೆ ಇನ್ನೂ ಬಲಿಷ್ಠವಾಗಿ ಮೂಡಿ ಬರಬೇಕು ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ ಕುಂದರ್ ಹೇಳಿದರು.

ಅವರು ಕುಂದಾಪುರ ಮೊಗವೀರ ಭವನದಲ್ಲಿ ಆ.25ರಂದು ನಡೆದ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕುಂದಾಪುರ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯಾವುದೇ ಸಮುದಾಯವಿರಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಬ್ದಾರಿ ಪೋಷಕರ ಮೇಲಿದೆ. ಒಳ್ಳೆಯ ಶಿಕ್ಷಣ ಪಡೆದರೆ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ. ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಹಲವಾರು ಸಂಘ ಸಂಸ್ಥೆಗಳಿವೆ. ವೈದ್ಯಕೀಯ ಶಿಕ್ಷಣ ಪಡೆಯುವ ಸಮಾಜದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ವಿಶೇಷ ಒತ್ತು ನೀಡಿ ವಿದ್ಯಾರ್ಥಿವೇತನ ನೀಡುತ್ತಿದೆ. ಈ ಸಲ 25 ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿದ್ದೇವೆ. ಅದರಲ್ಲಿ 20 ವಿದ್ಯಾರ್ಥಿಗಳು ಮೊಗವೀರ ಸಮುದಾಯದವರು. ಶಿಕ್ಷಣ ನೀಡಲು ಕಷ್ಟದಲ್ಲಿರುವ ಕುಟುಂಬಗಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ಕೆಲಸ ಯುವ ಸಂಘಟನೆಗಳು ಮಾಡಬೇಕು ಎಂದರು.

ಮೊಗವೀರ ಯುವ ಸಂಘಟನೆಯ ಕುಂದಾಪುರ ಘಟಕದ ಅಧ್ಯಕ್ಷರಾದ ಚಂದ್ರಹಾಸ ಕೋಣಿ ಅಧ್ಯಕ್ಷತೆ ವಹಿಸಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಗೇಶ್ ಹಳ್ನಾಡು, ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಮಾಧವ ಕುಂದಾಪುರ ಹಾಗೂ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರ ಮರಕಾಲ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ್ ಸಿ.ಸೌಕೂರು ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಅಧ್ಯಕ್ಷ ಜಯಂತ್ ಅಮೀನ್ ಕೋಡಿ, ದ,ಕ ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷರಾದ ಜಯ ಸಿ.ಕೋಟ್ಯಾನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ಮೊಗವೀರ ಯುವ ಸಂಘಟನೆ ನಿಕಟಪೂರ್ವ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ಮೊಗವೀರ ಯುವ ಸಂಘಟನೆ ಮಾಜಿ ಅಧ್ಯಕ್ಷರಾದ ಸದಾನಂದ ಬಳ್ಕೂರು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ರಾಮ ನಾಯ್ಕ ಗುಜ್ಜಾಡಿ, ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ ಗೌರವಾಧ್ಯಕ್ಷರಾದ ಗಣೇಶ್ ಮೆಂಡನ್ ಭಾಗವಹಿಸಿದ್ದರು.

ನೂತನ ಅಧ್ಯಕ್ಷರಾದ ನಾಗೇಶ್ ಹಳ್ನಾಡು ಎಲ್ಲರ ಸಹಕಾರ ಕೋರಿದರು. ಚೆಸ್‌ನಲ್ಲಿ ಸಾಧನೆ ಮಾಡಿದ ವರ್ಣಿತ ಕುಂದರ್, ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಚಿನ್ ನಾಯ್ಕ ಕಾವ್ರಾಡಿ ಇವರನ್ನು ಅಭಿನಂದಿಸಲಾಯಿತು. ನಿಕಟ ಪೂರ್ವ ಅಧ್ಯಕ್ಷರಾದ ಚಂದ್ರಹಾಸ ಕೋಣಿ, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಮದ್ದುಗುಡ್ಡೆ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರ ಘಟಕ ವ್ಯಾಪ್ತಿಯಲ್ಲಿ ೨೦೨೩-೨೪ರ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಯಿತು. ಘಟಕ ವ್ಯಾಪ್ತಿಯ ಗುರಿಕಾರರಿಗೆ ಗೌರವಧನ ನೀಡಿ ಗೌರವಿಸಲಾಯಿತು.

ಮಾಜಿ ಅಧ್ಯಕ್ಷರಾದ ಸುರೇಶ ವಿಠಲವಾಡಿ ಸ್ವಾಗತಿಸಿದರು. ಮೊಗವೀರ ಯುವ ಸಂಘಟನೆ ಮಾಜಿ ಅಧ್ಯಕ್ಷರಾದ ಸದಾನಂದ ಬಳ್ಕೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿಕಟಪೂರ್ವ ಕಾರ್ಯದರ್ಶಿ ಸಂತೋಷ ಮುದ್ದುಗುಡ್ಡೆ ವರದಿ ಮಂಡಿಸಿದರು. ಪ್ರಕಾಶ್ ಆನಗಳ್ಳಿ ಸನ್ಮಾನಿತರ ಪರಿಚಯಿಸಿದರು. ನೂತನ ಕಾರ್ಯದರ್ಶಿ ಮಾಧವ ಕುಂದಾಪುರ ವಂದಿಸಿದರು. ಸುಧಾಕರ ಕಾಂಚನ್ ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕನಸು ಮ್ಯೂಸಿಕಲ್ ಕುಂದಾಪುರ ಇವರಿಂದ ಸಂಗೀತ ರಸಮಂಜರಿ, ಸಿನಿಮಾ ನೃತ್ಯ, ಫನ್ನಿ ಗೇಮ್ಸ್ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!