Monday, September 9, 2024

ಆಲೂರು: ಬೈಂದೂರು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇವರ ಆಶ್ರಯದಲ್ಲಿ ಸ.ಹಿ.ಪ್ರಾ.ಶಾಲೆ ಆಲೂರಿನಲ್ಲಿ ಬೈಂದೂರು ವಲಯ ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟ ಅ.24 ರಂದು ಜರುಗಿತು.

ಪಂದ್ಯಾಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೇಶ್ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ಚಿತ್ತೂರು ಇದರ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕ್ರೀಡೆಯ ಮಹತ್ವವನ್ನು ತಿಳಿಸಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪ್ರಭಾರ ಪರಿವೀಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ರವಿ ಶೆಟ್ಟಿ, ಅರಣ್ಯ ಮಹಾಮಂಡಳ ನೌಕರರ ರಾಜ್ಯ ಮಟ್ಟ ಒಕ್ಕೂಟದ ಮಾಜಿ ಅಧ್ಯಕ್ಷರಾದ ರಘುರಾಮ ದೇವಾಡಿಗ, ದಾನಿಗಳಾದ ಚಂದ್ರಯ್ಯ ಆಚಾರ್ಯ ಕಳಿ, ಕ.ರಾ.ದೈ.ಶಿ. ಸಂಘ ಉಡುಪಿ ಇದರ ಉಪಾಧ್ಯಕ್ಷರಾದ ರವಿಶಂಕರ್ ಹೆಗ್ಡೆ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ನಾರಾಯಣ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ದತ್ತಾತ್ರೇಯ ಭಟ್, ಮುಖ್ಯೋಪಾಧ್ಯಾಯಿನಿ ಲೀನಾ ಕಾರ್ಡಿನ್ ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಭಡ್ತಿ ಹೊಂದಿದ ಆಲೂರಿನ ಚಂದ್ರಶೇಖರ ಶೆಟ್ಟಿ, ಶಾಲೆಗೆ 60,000/- ಮೌಲ್ಯದ ಬೆಂಚ್- ಡೆಸ್ಕ್‌ಗಳನ್ನು ಕೊಡುಗೆಯಾಗಿ ನೀಡಿದ ಚಂದ್ರಯ್ಯ ಆಚಾರ್ಯ ಕಳಿ ಹಾಗೂ ಎಚ್.ಸಿ.ಎಲ್. ಫೌಂಡೇಶನ್ ವತಿಯಿಂದ ನಡೆದ ರಾಷ್ಟ್ರಮಟ್ಟದ ಟ್ರಯಥ್ಲಾನ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿ ನಿತೇಶ್ ಜೆ., ಇವರನ್ನು ಸನ್ಮಾನಿಸಲಾಯಿತು.

ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಸ.ಹಿ.ಪ್ರಾ.ಶಾಲೆ ಆಲೂರಿನ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದವು. ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಸ.ಹಿ.ಪ್ರಾ.ಶಾಲೆ ಸೆಳ್ಕೋಡು ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಸ.ಮಾ.ಹಿ.ಪ್ರಾ.ಶಾಲೆ ಉಪ್ಪುಂದ ಗಳಿಸಿದರು.

ಮುಖ್ಯೋಪಾಧ್ಯಾಯಿನಿ ಲೀನಾ ಕಾರ್ಡಿನ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ವೀರೇಂದ್ರ ಜೋಗಿ ವಂದಿಸಿದರು. ಸಹ ಶಿಕ್ಷಕಿ ವಿದ್ಯಾ ನಿರೂಪಿಸಿದರು. ಶಿಕ್ಷಕರಾದ ಕುಸುಮ, ದಿನಕರ, ವಿಶ್ವನಾಥ, ವಿದ್ಯಾಗೌಡ, ಮಂಜುಳಾ, ದೀಪಾ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!