Monday, September 9, 2024

ಕಾರ್ಕಳ ಅತ್ಯಾಚಾರ ಪ್ರಕರಣ : ಡ್ರಗ್ಸ್‌ ಜಾಲಕ್ಕೆ ಬೆಂಗಳೂರು, ತಿರುಪತಿ ಲಿಂಕ್‌ !? | ಮತ್ತಿಬ್ಬರ ಬಂಧನ

ಜನಪ್ರತಿನಿಧಿ (ಉಡುಪಿ) : ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬಂಧಿತ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಎರಡು ದಿನಗಳ ಹಿಂದೆ ವಶಕ್ಕೆ ಪಡೆದಿದ್ದರು. ಪ್ರಾಥಮಿಕ ಹಂತದ ವಿಚಾರಣೆಯ ಬಳಿಕ ಇದೀಗ ಬಂಧನ ಪ್ರಕ್ರಿಯೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ, ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪೊಲೀಸ್‌ ಕಸ್ಟಡಿಗೆ ತೆಗೆದುಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಬಂಧಿತ ಇಬ್ಬರನ್ನು ಸಿಯಾಜ್‌ ಹಾಗೂ ಗಿರಿ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಪ್ರಮುಖ ಆರೋಪಿ ಅಲ್ತಾಫ್‌ ಗೆ ಡ್ಗ್ಸ್‌ ಪೂರೈಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಗೆ ನೀಡಲಾದ ಡ್ರಗ್ಸ್‌ ಮೂಲದ ಬಗ್ಗೆ ತನಿಖೆ ತೀವ್ರಗೊಳಿಸಿದ್ದು, ಅದು ಬೆಂಗಳೂರು, ತಿರುಪತಿಯಿಂದ ಸರಬರಾಜು ಆಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಭಯ್‌ ಹಾಗೂ ಈ ಇಬ್ಬರು ಬಂಧಿತರನ್ನು ಬೆಂಗಳೂರು ಹಾಗೂ ತಿರುಪತಿಗೆ ಕರೆದೊಯ್ದು ತನಿಖೆ ನಡೆಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!