spot_img
Wednesday, April 1, 2026
spot_img

ಮಡಾ ಹಗರಣ : ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಆ.31 ಕ್ಕೆ ಮುಂದೂಡಿ ʼಹೈʼ ಆದೇಶ !

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮ  ಜಾಗ ಹಂಚಿಕೆಯ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆ.31 ಕ್ಕೆ ಮುಂದೂಡಿ ಆದೇಶಿಸಿದೆ.

ಇಂದು(ಗುರುವಾರ) ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಮುಖ್ಯಮಂತ್ರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ನ್ಯಾಯಾಂಗ ಪರಿಶೀಲಿಸಬಹುದು. ರಾಜ್ಯಪಾಲರು ಈ ಪ್ರಕ್ರಿಯೆಯಲ್ಲಿ ವಿವೇಚನೆಯನ್ನು ಬಳಸಿಲ್ಲ ಎಂದು ಮುಖ್ಯಮಂತ್ರಿ ಪರ ವಾದ ಮಂಡಿಸಿದರು.

ರಾಜ್ಯಪಾಲರು ಕ್ಯಾಬಿನೆಟ್ ನಿರ್ಧಾರಕ್ಕೆ ಬದ್ಧನಲ್ಲ ಎಂದಿದ್ದಾರೆ ಎಂದು ಮುಖ್ಯಮಂತ್ರಿ ಪರ ವಕೀಲರು ಹೇಳುತ್ತಿದ್ದಂತೇ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು ಕ್ಯಾಬಿನೆಟ್​ ನಿರ್ಧಾರಕ್ಕೆ ರಾಜ್ಯಪಾಲರು ಬದ್ಧರಾಗಬೇಕಿಲ್ಲ. ಉಳಿದೆಲ್ಲ ಪ್ರಕರಣಗಳಲ್ಲಿ ರಾಜ್ಯಪಾಲರು ಕ್ಯಾಬಿನೆಟ್​ ಸಲಹೆ ಪರಿಗಣಿಸಬೇಕು. ಈ ಪ್ರಕರಣದಲ್ಲಿ ಸಲಹೆ ಪರಿಗಣಿಸಬೇಕೆಂದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ವಕೀಲ ಅಭಿಷೇಕ್ ಮನು ಸಿಂಘ್ವಿ ಸಂಪುಟ​ ನಿರ್ಣಯಕ್ಕೆ ಬದ್ಧನಾಗಿಲ್ಲ ಎಂಬ ಕಾರಣಕ್ಕೆ ತನಿಖೆಗೆ ಅನುಮತಿಸುವ ನಿಲುವು ಸರಿಯಲ್ಲ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಪ್ರಕರಣಗಳಲ್ಲಿ ರಾಜ್ಯಪಾಲರು ಪಾಸಿಕ್ಯೂಷನ್‌​ಗೆ ಅನುಮತಿಸಿಲ್ಲ ಎಂದು ಹೈಕೋರ್ಟ್ ಗೆ ಮನವರಿಕೆ ಮಾಡಿಕೊಡುವುದಕ್ಕೆ ಸಿಂಘ್ವಿ ಯತ್ನಿಸಿದ ಪ್ರಸಂಗವೂ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!