Tuesday, September 17, 2024

ಡಿಕೆಶಿ ಪ್ರಕರಣದಲ್ಲಿ ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು) : ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯೂ ಇಂದು(ಗುರುವಾರ) ಹೈಕೋರ್ಟ್ ನಲ್ಲಿ ನಡೆಯಿತು.

ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಹೇಳಿದ್ದು, ಸಿಬಿಐ ಅರ್ಜಿಯನ್ನು ವಿಲೇವಾರಿ ಮಾಡಿದೆ.

ಸಿಬಿಐ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಅರ್ಹವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸುವಂತೆ ಹೇಳಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!