Wednesday, September 11, 2024

ಕುಂದಾಪುರ: 21ನೇ ಜಾನುವಾರು ಗಣತಿ ಕಾರ್ಯಕ್ರಮ-2024 ಉದ್ಘಾಟನೆ

ಕುಂದಾಪುರ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕ್ ಪಂಚಾಯತ್, ಪಶುಪಾಲನ ಮತ್ತು ಪಶು ವೈದ್ಯ ಸೇವಾ ಇಲಾಖೆ ಇವರ ಆಶ್ರಯದಲ್ಲಿ ಆ.29ರಂದು ಕುಂದಾಪುರದ ತಾಲೂಕು ಪಂಚಾಯಿತಿನ ಕಚೇರಿಯಲ್ಲಿ ೨೧ನೆಯ ಜಾನುವಾರು ಗಣತಿ ತಾಲೂಕು ಮಟ್ಟದ ತಾಂತ್ರಿಕ ಕಾರ್ಯಗಾರ ನಡೆಯಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪಶುಪಾಲನಾ ಇಲಾಖಾ ವ್ಯಾಪ್ತಿಯಲ್ಲಿ ಬರುವ ಯೋಜನೆಗಳು ಪರಿಣಾಮಕಾರಿ ಅನುಷ್ಠಾನ ಆಗುವ ಆಗತ್ಯವಿದೆ. ಜಾನುವಾರು ಗಣತಿ ಕಾರ್ಯ ಮಹತ್ವದ್ದಾಗಿದ್ದು ಯಶಸ್ವಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಡಾ. ರೆಡ್ಡಪ್ಪ ಕೋಟ, ಪಶುವೈದ್ಯಾಧಿಕಾರಿ ಡಾ. ಅನಿಲ್ ಕುಮಾರ್ ಕುಂದಾಪುರ, ಪಶು ವೈದ್ಯಾಧಿಕಾರಿ ಡಾ. ಬಾಬಣ್ಣ ಪೂಜಾರಿ ಹಾಗೂ ಪಶು ಸಹಾಯಕರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!