Monday, September 9, 2024

ಅತ್ಯಾಚಾರ ಹಾಗೂ ಕೊ* ಪ್ರಕರಣಗಳಲ್ಲಿ ಕಠಿಣ ಕಾನೂನು ಜಾರಿಗೊಳಿಸುವಂತೆ ಪ್ರಧಾನಿಗೆ ದೀದಿ ಒತ್ತಾಯ

ಜನಪ್ರತಿನಿಧಿ (ಕೋಲ್ಕತ್ತಾ) : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದು, ಅತ್ಯಾಚಾರ ಹಾಗೂ ಕೊಲೆಯಂತಹ ಘೋರ ಅಪರಾಧಗಳಿಗೆ ಕಠಿಣ ಕಾನೂನು ಮತ್ತು ಇತರರಿಗೆ ಪಾಠವಾಗುವಂತಹ ಶಿಕ್ಷೆ ಜಾರಿಗೆ ತನ್ನಿ ಎಂದು ಮನವಿ ಮಾಡಿದ್ದಾರೆ.

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರೊಬ್ಬರ ಅತ್ಯಾಚಾರ ಮತ್ತು ಹತ್ಯೆಯ ಕುರಿತು ರಾಷ್ಟ್ರವ್ಯಾಪಿ ಆಕ್ರೋಶದ ನಂತರ ಈ ವಿಷಯದ ಬಗ್ಗೆ ಕೆಲವು ದಿನಗಳ ಹಿಂದೆ ಮೋದಿಗೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ, ಅತ್ಯಾಚಾರ ಪ್ರಕರಣಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕಡ್ಡಾಯ ನಿಬಂಧನೆ ಜಾರಿಗೆ ತರಬೇಕು ಎಂದು ಕೋರಿದ್ದರು.

ಅತ್ಯಾಚಾರಿಗಳಿಗೆ ಮರಣದಂಡನೆಯನ್ನು ಖಚಿತಪಡಿಸಿಕೊಳ್ಳಲು ಅಸ್ತಿತ್ವದಲ್ಲಿರುವ ಕಾನೂನುಗಳಿಗೆ ತಿದ್ದುಪಡಿ ಮಾಡಲು ಮುಂದಿನ ವಾರ ವಿಧಾನಸಭೆ ಅಧಿವೇಶನ ಕರೆದಿದ್ದು, ಮಸೂದೆ ಮಂಡಿಸಿ ಅಂಗೀಕರಿಸಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಬುಧವಾರ ಹೇಳಿದ್ದರು.

ತಾವು ಬರೆದ ಪತ್ರಕ್ಕೆ ಪ್ರಧಾನಿಯಿಂದ ಇನ್ನೂ ಯಾವುದೇ ಉತ್ತರವನ್ನು ಸ್ವೀಕರಿಸಿಲ್ಲ ಎಂದು ಹೇಳಿದ ಮಮತಾ ಬ್ಯಾನರ್ಜಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ ಪ್ರತಿಕ್ರಿಯೆ ಸ್ವೀಕರಿಸಿದ್ದೇನೆ ಎಂದು ಬರೆದಿದ್ದಾರೆ.

10 ವಿಶೇಷ POCSO(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ನ್ಯಾಯಾಲಯಗಳನ್ನು ರಾಜ್ಯ ಸರ್ಕಾರ ಅನುಮೋದಿಸಿದೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 88 ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯಗಳು ಮತ್ತು 62 POCSO- ನ್ಯಾಯಾಲಯಗಳು ಈಗಾಗಲೇ ರಾಜ್ಯದ ನಿಧಿಯ ಮೇಲೆ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಇತರರಿಗೆ ಪಾಠವಾಗುವಂತಹ ಶಿಕ್ಷೆ ನೀಡಲು ಕಠಿಣ ಕಾನೂನನ್ನು ಜಾರಿಗೊಳಿಸಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ನ್ಯಾಯ ಒದಗಿಸಲು ಈ ಪ್ರಕರಣಗಳನ್ನು ಫಾಸ್ಟ್ ಟ್ರಾಕ್ ಕೋರ್ಟ್ ಮೂಲಕ 15 ದಿನದಲ್ಲಿ ವಿಚಾರಣೆ ಮುಗಿಸಬೇಕು ಎಂದು ಮಮತಾ ಬ್ಯಾನರ್ಜಿ ಈ ಹಿಂದೆ ಮೋದಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!