Monday, September 9, 2024

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ‘ಕಲಿಯುಗದ ಕಲ್ಪವೃಕ್ಷ’-ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

ಕುಂದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾತೃ ವಾತ್ಸಲ್ಯ ನೀಡುವ ಸಂಸ್ಥೆಯಾಗಿದೆ. ಶಿಕ್ಷಣಕ್ಕೆ ಪೂರಕವಾಗಿ ಜ್ಞಾನದೀಪ ಶಿಕ್ಷಕರ ಒದಗಣೆ, ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಸರಕಾರಿ ಶಾಲೆಗಳಿಗೆ ಪೀಠೋಪಕರಣಗಳ ಜೊತೆಗೆ ಶಿಕ್ಷಣ ಆರೋಗ್ಯ ಮಹಿಳಾ ಸಬಲೀಕರಣ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನೀಡುತ್ತಿರುವ ಸಂಸ್ಥೆಯನ್ನು “ಕಲಿಯುಗದ ಕಲ್ಪವೃಕ್ಷ”ವೆಂದರೆ ತಪ್ಪಾಗಲಾರದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು, ಕುಂದಾಪುರ ಮತ್ತು ಕುಂದಾಪುರ ೦೨ ಯೋಜನಾ ಕಛೇರಿಯ ಜಂಟಿ ಆಶ್ರಯದಲ್ಲಿ ಕೋಟೇಶ್ವರ ವಿಶ್ವಕರ್ಮ ಸಭಾ ಭವನದಲ್ಲಿ ೨೦೨೪-೨೦೨೫ನೇ ಸಾಲಿನ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಹಾಗೂ ವಿವಿಧ ಅನುದಾನಗಳ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.

ಕಾರ್ಯಕ್ರಮ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಧರ್ಮಸ್ಥಳ ಸಂಸ್ಥೆಯ ಕಾರ್ಯಕ್ರಮಗಳು ಸರ್ವರಿಗೂ ಸಮಬಾಳು ತತ್ವದಡಿಯಲ್ಲಿ ನಡೆಯುವ ಕಾರ್ಯಕ್ರಮವಾಗಿದೆ. ಒಂದು ಧಾರ್ಮಿಕ ಕ್ಷೇತ್ರದ ಮೂಲಕ ಮನುಷ್ಯನ ಜೀವನಕ್ಕೆ ಅನುಕೂಲವಾಗುವ ವಿವಿಧ ಕಾರ್ಯಕ್ರಮಗಳನ್ನು ಅನುಷ್ಟಾನಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ರಟ್ಟಾಡಿ ನವೀನಚಂದ್ರ ಶೆಟ್ಟಿ ವಹಿಸಿದ್ದರು.
ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ವಕೀಲ ಉಮೇಶ್ ಶೆಟ್ಟಿ ಶಾನ್ಕಟ್ಟು, ಎಲ್.ಐ.ಸಿ ಪ್ರಬಂಧಕ ದಿನೇಶ್ ಪ್ರಭು, ಭಜನಾ ಮಂಡಳಿ ಅಧ್ಯಕ್ಷ ರಾಜೇಂದ್ರ ಕುಮಾರ ಬಸ್ರೂರು, ರಥಶಿಲ್ಪಿ ರಾಜಗೋಪಾಲ್ ಆಚಾರ್ಯ, ಉದ್ಯಮಿ ಸುಬ್ರಮಣ್ಯ ಶೆಟ್ಟಿ ಕೋಟೇಶ್ವರ, ಶ್ರೀ ಕ್ಷೇ.ಧ.ಗ್ರಾ ಯೋಜನೆ ನಿರ್ದೇಶಕ ನಾಗರಾಜ್ ಶೆಟ್ಟಿ, ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ ಕೆರೆಕಟ್ಟೆ ಮತ್ತು ಸುಬ್ರಮಣ್ಯ ಆಚಾರ್ ಉಪಸ್ಥಿತರಿದ್ದರು.

ಯೋಜನಾಧಿಕಾರಿ ನಾರಾಯಣ ಪಾಲನ್ ಸ್ವಾಗತಿಸಿ, ಮೇಲ್ವಿಚಾರಕಿ ವೇದಾವತಿ ವಂದಿಸಿದರು. ಯೋಜನಾಧಿಕಾರಿ ಪಾರ್ವತಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!