spot_img
Wednesday, April 1, 2026
spot_img

ಬಿ. ಬಿ ಹೆಗ್ಡೆ ಕಾಲೇಜು : ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಜನಪ್ರತಿನಿಧಿ (ಕುಂದಾಪುರ) : ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ದಿನಕ್ಕೆ ಒಂದು ಗಂಟೆಯಾದರೂ ಆಟದಲ್ಲಿ ತೊಡಗಿಕೊಂಡರೆ ಪಾಠವನ್ನು ಅರ್ಥೈಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಿತವಾದ ಆಹಾರ ಪದ್ಧತಿಯೂ ಇದರಿಂದ ರೂಢಿಯಾಗುತ್ತದೆ. ಇವೆಲ್ಲವೂ ಕ್ರೀಡೆಯಿಂದ ಸಾಧ್ಯ ಎಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಆಯೋಜಿಸಿದ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮೇಜರ್ ಧ್ಯಾನ್ ಚಂದ್ ಅವರ ಪರಿಶ್ರಮ ಇಂದು ಅವರ ಹೆಸರು ಮನ್ನಣೆ ಪಡೆಯಲು ಕಾರಣ. ಕ್ರೀಡೆಯಲ್ಲಿ ಸಾಧನೆ ಮಾಡಲು ಅಂತಹ ಪರಿಶ್ರಮದ ಅಗತ್ಯವಿದೆ ಎಂದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿ, ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀಕಾಂತ್ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಹೆಸ್ಕತ್ತೂರು ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ನೆಟ್‌ಬಾಲ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟ್ರ ಮಟ್ಟದಲ್ಲಿ

ಗುರುತಿಸಿಕೊಂಡ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಶಶಾಂಕ್‌ನನ್ನು ಅಭಿನಂದಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!