Monday, September 9, 2024

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರು ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ !

ಜನಪ್ರತಿನಿಧಿ (ಬೆಂಗಳೂರು) : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ ಇಂದು(ಶುಕ್ರವಾರ) ಮಹತ್ವದ ತೀರ್ಪು ನೀಡಿದೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಕೋರಿ ಸೌಜನ್ಯಳ ತಂದೆ, ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿ ಆದೇಶಿಸಿದೆ.

ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಕೂಡಾ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ಜೆ ಎಂ ಖಾಜಿ ಅವರ ವಿಭಾಗೀಯ ನ್ಯಾಯಪೀಠ ಈ ಆದೇಶವನ್ನು ನೀಡಿದೆ.

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ‌ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ಮಕ್ಕಳ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಐಪಿಸಿ ಸೆಕ್ಷನ್‌ 302 (ಕೊಲೆ) ಮತ್ತು 376 (ಅತ್ಯಾಚಾರ) ಆರೋಪದ ಅಡಿ ಸಂತೋಷ್‌ ರಾವ್‌ ಅವರನ್ನು ದೋಷಿ ಎಂದು ಆದೇಶಿಸಬೇಕು ಎಂದು ಕೋರಿತ್ತು.

ಇನ್ನು, ವಿಚಾರಣಾಧೀನ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಸಂತೋಷ್‌ ರಾವ್‌ ಅವರು ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.

ಮತ್ತೊಂದೆಡೆ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ದಳ ರಚಿಸಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

2012ರ ಅಕ್ಟೋಬರ್‌ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್‌ ರಾವ್‌ ಎಂಬಾತನ ಬಂಧಿಸಿದ್ದರು. ಬಳಿಕ ಈ ಪ್ರಕರಣ ಸಿಬಿಐಗೆ ವರ್ಗಾಯಿಸಲಾಗಿದ್ದು, ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು 2023ರ ಜೂನ್‌ 16ರಂದು ಖುಲಾಸೆಗೊಳಿಸಿತ್ತು.

Karnataka High Court has dismissed the CBI’s appeal challenging the acquittal of the lone accused person Santosh Rao, in the 2012 case of rape of 17-yr-old girl in Pangala, Dharmasthala.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!