Wednesday, September 11, 2024

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ | ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ | ಕಾಂಗ್ರೆಸ್‌ ನಾಯಕರ ʼರಾಜಭವನ ಚಲೋʼ

ಜನಪ್ರತಿನಿಧಿ (ಬೆಂಗಳೂರು) : ವಿವಾದಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಇಂದು(ಶನಿವಾರ) ಪ್ರತಿಭಟಸಿದೆ.

ವಿಧಾನಸೌಧದ ಗಾಂಧಿ ಪ್ರತಿಮೆ ಹತ್ತಿರ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಳಗೊಂಡಂತೆ ಕಾಂಗ್ರೆಸ್‌ ಸರ್ಕಾರದ ಸಚಿವರು, ಕಾಂಗ್ರೆಸ್ ಶಾಸಕರು,‌ ಕಾಂಗ್ರೆಸ್ ಸಂಸದರು ಭಾಗವಹಿಸಿದರು.

ಬಳಿಕ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಡಳಿತ ಪಕ್ಷದ ನಾಯಕರು ‘ರಾಜಭವನ ಚಲೋ’ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ʼರಾಜ್ಯಪಾಲರು ತೊಲಗಲಿʼ ಎಂಬ ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯಪಾಲ ಥಾವರಚಂದ್‌ ಗೆಲ್ಹೋಟ್‌ ಅವರ ವಿರುದ್ಧ ಆಕ್ರೋಶ ಹೊರ ಹಾಕಿದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ಗೆಹ್ಲೋಟ್ ತಮ್ಮ ವಿರುದ್ಧ ತಾರತಮ್ಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 218ರ ಅಡಿಯಲ್ಲಿ ಸಿಎಂ ವಿರುದ್ಧ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ದೂರುಗಳಲ್ಲಿ ಉಲ್ಲೇಖಿಸಿರುವ ಅಪರಾಧ ಕುರಿತ ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 16ರಂದು ಅನುಮತಿ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!