spot_img
Wednesday, April 1, 2026
spot_img

ಕುಂದಾಪುರದಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಮೂರು ಕೋಟಿ ಮಂಜೂರು !

ಜನಪ್ರತಿನಿಧಿ (ಕುಂದಾಪುರ/ಬೆಂಗಳೂರು) : ಕುಂದಾಪುರ ತಾಲೂಕಿನಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಬೇಡಿಕೆಯಿದ್ದಿತ್ತು. ಸದ್ಯ ನೂತನ ಪ್ರವಾಸಿ ಮಂದಿರ ನಿರ್ಮಾಣ ಕಾರ್ಯಕ್ಕೆ ಅಂದಾಜು ಪಟ್ಟಿ ತಯಾರಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನೂತನ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಕಾಂಗ್ರೆಸ್ ಬ್ಲಾಕ್‌ ನ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿಯವರಿಗೆ ಮನವಿ ಸಲ್ಲಿಸಿದ್ದರು, ಮನವಿಯ ಹಿನ್ನೆಲೆಯಲ್ಲಿ ಮಂಜುನಾಥ ಭಂಡಾರಿ ಅವರು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್‌ ಜಾರಕಿಹೊಳಿಯವರಿಗೆ ಪತ್ರದ ಮೂಲಕ ಕುಂದಾಪುರದಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣ ಮಾಡಿಕೊಡುವಂತೆ ವಿನಂತಿಸಿಕೊಂಡಿದ್ದರು. ಸದ್ಯ, ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಮೂರು ಕೋಟಿ ಮಂಜೂರಾಗಿದೆ ಎಂದು ತಿಳಿದು ಬಂದಿದೆ.

ನೂತನ ಪ್ರವಾಸಿ ಮಂದಿರಕ್ಕೆ ಹಲವು ವರ್ಷಗಳಿಂದ ಬೇಡಿಕೆ :
ಉಡುಪಿ ಜಿಲ್ಲೆಯ ಕುಂದಾಪುರ ಉಪವಿಭಾಗದ ಕೇಂದ್ರವಾಗಿದ್ದು ಅನೇಕ ಉಪವಿಭಾಗ ಮಟ್ಟದ ಕಚೇರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಡುಪಿ ಜಿಲ್ಲೆಯ ಕುಂದಾಪುರ ಹೊರತುಪಡಿಸಿ ಉಳಿದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಳೆ ಪ್ರವಾಸಿ ಮಂದಿರರ ಜೊತೆ ಹೊಸ ಪ್ರವಾಸಿ ಮಂದಿರಗಳು ನಿರ್ಮಾಣವಾಗಿರುತ್ತವೆ.

ಆದರೆ ಉಪವಿಭಾಗದ ಕೇಂದ್ರವಾಗಿರುವ ಕುಂದಾಪುರದಲ್ಲಿ ಮಾತ್ರ ಹಳೇಯ ಕೇವಲ 2 ಕೊಠಡಿಯಿರುವ ಪ್ರವಾಸಿ ಮಂದಿರವಿರುತ್ತದೆ. ಇಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಿಸಲು ಸ್ಥಳಾವಕಾಶವಿದ್ದು ಸಾರ್ವಜನಿಕರ ಬೇಡಿಕೆಯಿದೆ. ಆದ್ಯತೆಯ ಮೇರೆಗೆ ಕುಂದಾಪುರಕ್ಕೆ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಂಜೂರಾತಿಯನ್ನು ನೀಡಿ ಸೂಕ್ತ ಆದೇಶ ಮಾಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದಿತ್ತು. ಸದ್ಯ, ಈ ಬೇಡಿಕೆಗೆ ಪ್ರಾಥಮಿಕ ಫಲ ಸಿಕ್ಕಂತಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!