spot_img
Tuesday, March 31, 2026
spot_img

ಉಡುಪಿಯ ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರ ದರ್ಶನ ಪಡೆದ ಜೂ. ಎನ್‌ಟಿಆರ್‌ | ರಿಷಬ್‌ ಶೆಟ್ಟಿ, ಪ್ರಶಾಂತ್‌ ನೀಲ್‌ ಸಾಥ್‌ !

ಜನಪ್ರತಿನಿಧಿ (ಉಡುಪಿ) : ಉಡುಪಿ ಶ್ರೀ ಕೃಷ್ಣ ಮಠಕ್ಕೆ ತೆಲುಗಿನ ಸ್ಟಾರ್ ನಟ ಜೂನಿಯರ್ ಎನ್ ಟಿ ಆರ್ ಆಗಮಿಸಿ ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರ ದರ್ಶನ ಪಡೆದಿದ್ದಾರೆ. ಉಡುಪಿಗೆ ಬಂದ ಜೂನಿಯರ್ ಎನ್ ಟಿ ಆರ್ ಅವರಿಗೆ ಡಿವೈನ್‌ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಸಾಥ್ ನೀಡಿದ್ದಾರೆ.

ಶ್ರಾವಣ ಮಾಸದ ಕೊನೆಯ ಶನಿವಾರವಾದ ಇಂದು ಜೂನಿಯರ್ ಎನ್‌ ಟಿ ಆರ್ ಕುಟುಂಬ ಸಹಿತ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜೂನಿಯರ್ ಎನ್ ಟಿ ಆರ್ ದೇವರ ಸಿನಿಮಾ ಬಳಿ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ಕೂಡ ಆರಂಭವಾಗಿದ್ದು, ಇದೀಗ ನಿರ್ದೇಶಕ ಪ್ರಶಾಂತ್ ಜೊತೆ ಉಡುಪಿಯಲ್ಲಿ ದೇವರ ದರ್ಶನ ಪಡೆದಿದ್ದಾರೆ.

RRR ಸಿನಿಮಾ ಬಳಿಕ ಜೂನಿಯರ್ ಎನ್ ಟಿಆರ್ ಸುಮಾರು ಒಂದೂವರೆ ವರ್ಷ ಗ್ಯಾಪ್ ತೆಗೆದುಕೊಂಡು ದೇವರ ಸಿನಿಮಾ ಮೂಲಕ ಮತ್ತೆ ಆನ್‌ ಸ್ಕ್ರೀನ್‌ ನಲ್ಲಿ ರಾರಾಜಿಸಲು ತಯಾರಾಗಿದ್ದಾರೆ. ದೇವರ ಸಿನಿಮಾವನ್ನು ತೆರೆ ಮೇಲೆ ನೋಡಲು ಫ್ಯಾನ್ಸ್ ಕೂಡ ಕಾಯುತ್ತಿದ್ದಾರೆ. ದೇವರ ರಿಲೀಸ್ ಗೂ ಮುನ್ನವೇ ಎನ್ ಟಿ ಆರ್, ಪ್ರಶಾಂತ್ ನೀಲ್ ಸಿನಿಮಾದಲ್ಲಿ  ನಿರತರಾಗಿದ್ದಾರೆ.

ದೇವರ ಸಿನಿಮಾ ಕೂಡ ಅತಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ದೇವರ ಚಿತ್ರದ ಬಳಿಕ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಎನ್ ಟಿ ಆರ್ ಮತ್ತೊಂದು ದೊಡ್ಡ ಸಿನಿಮಾ ಮಾಡಲಿದ್ದಾರೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂಬ ಟೈಟಲ್ ಫಿಕ್ಸ್ ಮಾಡಿದ್ದಾರೆ ಎನ್ನಲಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!