spot_img
Wednesday, April 1, 2026
spot_img

ಆತ್ರಾಡಿ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಗಣಿತ ಕಾರ್ಯಗಾರ

ಕುಂದಾಪುರ: ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿಗೆ ಗಣಿತ ಕಾರ್ಯಗಾರವನ್ನು ಬೈಂದೂರು ವಲಯದ ಎಲ್ಲಾ ಶಾಲೆಯ ಗಣಿತ ಶಿಕ್ಷಕರಿಗೆ ತರಬೇತಿ ನೀಡುವ ಸಲುವಾಗಿ ಆಯೋಜಿಸಲಾಯಿತು.

ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯೋಪಾಧ್ಯಾಯನಿ ದೀಪಿಕಾ ಸುಭಾಷ್ ಸ್ವಾಗತಿಸಿದರು. ಎಸ್ ಎಸ್ ಎಲ್ ಸಿ ನೋಡಲಾಧಿಕಾರಿ ಚಂದ್ರ ಕೆ ದೇವಾಡಿಗ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬೈಂದೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಶ್ರೀಧರ್ ಭಟ್ ,ಕೆ ಪಿ ಎಸ್ ಸಿ ವಂಡ್ಸೆ ಇಲ್ಲಿನ ಮುಖ್ಯ ಶಿಕ್ಷಕರಾದ ಶ್ರೀಧರ್ ಭಟ್, ಹೆಮ್ಮಾಡಿ ಜನತಾ ಪ್ರೌಢಶಾಲೆಯ ಶಿಕ್ಷಕ ಶ್ರೀಧರ್ ಗಾಣಿಗ ಭಾಗವಹಿಸಿ ತರಬೇತಿ ನೀಡಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!