Tuesday, September 17, 2024

ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ : ಸುಗುಣೇಂದ್ರ ತೀರ್ಥ ಸ್ವಾಮೀಜಿ | ಟೀಕೆಗೆ ಕಾರಣವಾದ ಸ್ವಾಮೀಜಿ ಹೇಳಿಕೆ.

ಜನಪ್ರತಿನಿಧಿ (ಉಡುಪಿ) : ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮೀಜಿ ಮಾತನಾಡಿದರು.

ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ. ಸಂಸ್ಕೃತ ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ. ಇದು ಕೇವಲ ಭಾರತೀಯ ಭಾಷೆಗಳ ಮೂಲವಲ್ಲದೇ ಆಂಗ್ಲಭಾಷೆಯ ಮೂಲವೂ ಆಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇರಳ ರಾಜ್ಯಪಾಲ ಆರಿಫ್ ಖಾನ್ ಮಾತನಾಡಿ, ದೇವರಿಗೆ ಯಾವ ಭಾಷೆಯಲ್ಲಿ ಪ್ರಾರ್ಥಿಸುತ್ತೇವೆ ಎನ್ನುವುದಕ್ಕಿಂತ ಯಾವ ಭಾವದಲ್ಲಿ ಪ್ರಾರ್ಥಿಸುತ್ತೇವೆ ಎನ್ನುವದು ಮುಖ್ಯ ಎಂದು ಹೇಳಿದ್ದಾರೆ.

ಸಭೆಯಲ್ಲಿ ಉಡುಪಿ ಶಾಸಕ ಯಶಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಡಾ. ಹೆಚ್‌, ಎಸ್‌ ಬಲ್ಲಾಳ್‌, ಪ್ರತಾಪ್‌ ಸಿಂಹ ನಾಯಕ್‌, ಪ್ರಮೋದ್‌ ಮಧ್ವರಾಜ್‌ ಮೊದಲಾದವರು ಉಪಸ್ಥಿತರಿದ್ದರು.

ಸದ್ಯ,ಸ್ವಾಮೀಜಿಯವರ ಈ ಹೇಳಿಕೆ ಈಗ ಸಾಮಾಜಿಕ ವಲಯದಲ್ಲಿ ಎಡ ಪಂಕ್ತಿಯವರ ಟೀಕೆಗೆ ಕಾರಣವಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!