Monday, September 9, 2024

ಕೆಪಿಎಸ್‌ಸಿ ಪರೀಕ್ಷಾ ಪತ್ರಿಕೆಯಲ್ಲಿ ಭಾಷಾಂತರ ಲೋಪ : ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಆಯೋಗಕ್ಕೆ ಸಿಎಂ ಸೂಚನೆ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಲೋಕಸೇವಾ ಆಯೋಗದಿಂದ ಇತ್ತೀಚೆಗೆ(ಆ.27) ನಡೆದ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿ ಅಸಮರ್ಪಕ ಭಾಷಾಂತರ ಹಾಗೂ ಇಡಿ ಪರೀಕ್ಷೆಯ ಪ್ರಕ್ರಿಯೆಯಲ್ಲಿ ಲೋಪವಾಗಿರುವ ವಿಚಾರಕ್ಕೆ ಸಂಬಂಧಿಸಿ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಗಕ್ಕೆ ಸೂಚನೆ ನೀಡಿದ್ದಾರೆ.

ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್‌ಸಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಈ ಲೋಪಗಳಿಗೆ ಕಾರಣರಾದ ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಶಿಸ್ತು ಕ್ರಮ ಅನುಸರಿಸಿ ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಹಾಗೂ ನಂಬಿಕಾರ್ಹತೆಯನ್ನು  ಎತ್ತಿಹಿಡಿಯಲು ಮತ್ತು ಪರೀಕ್ಷಾರ್ಥಿಗಳ ಹಿತರಕ್ಷಿಸಲು ನಾವು ಬದ್ಧರಾಗಿದ್ದೇವೆ ಎಂದೂ ಅವರು ಹೇಳಿದ್ದಾರೆ.

KPSC to reconduct of the examination within 2 months to ensure fairness to all candidates : ಸಿಎಂ ಸಿದ್ದರಾಮಯ್ಯ

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!