spot_img
Wednesday, April 1, 2026
spot_img

ಪ್ರಭಾವ ಬಳಸಿ ಸಿದ್ಧಾರ್ಥ ಟ್ರಸ್ಟ್‌ಗೆ ಸಿಎ ನಿವೇಶನ : ಸರ್ಕಾರದಿಂದ ಸವಿವರ ಕೇಳಿದ ರಾಜ್ಯಪಾಲರು

ಜನಪ್ರತಿನಿಧಿ (ಬೆಂಗಳೂರು) :  ಕೆಐಎಡಿಬಿಯಿಂದ (KIADB) ಪ್ರಭಾವ ಬಳಸಿ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಗಂಭೀರ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕೇಳಿ ಬಂದಿದ್ದು, ಸದ್ಯ ಈ ಬಗ್ಗೆ  ಸವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚನೆ ನೀಡಿದ್ದಾರೆಂದು ಇಂದು(ಸೋಮವಾರ) ಮಾಹಿತಿ ಲಭ್ಯವಾಗಿದೆ.

ರಾಜ್ಯಪಾಲರು ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಸವಿವರ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಕೆಐಎಡಿಬಿ ಇತ್ತೀಚೆಗೆ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್‌ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದೂರು ಸಲ್ಲಿಸಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹಚ್ಚಿನ ವಿವರಣೆ ನೀಡುವಂತೆ ಸೂಚಿಸಿದ್ದಾರೆಂದು ಮಾಹಿತಿ ಲಭ್ಯವಾಗಿದೆ.

ರಾಜ್ಯಪಾಲರಿಂದ ಸವಿವರ ಸಲ್ಲಿಸುವಂತೆ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ನದು ಒಂದು ಸಂವಿಧಾನ. ಕಾಂಗ್ರೆಸ್​​ಗೊಂದು ಸಂವಿಧಾನ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ವಿಚಾರದಲ್ಲಿ ಬಿಜೆಪಿಯವರು ಮೊದಲು 10 ಆರೋಪ ಮಾಡುತ್ತಿದ್ದರು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು. ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಸಿಎ ನಿವೇಶನ ವಿಚಾರ ಮಾತನಾಡುತ್ತಿಲ್ಲ ಎಂದು ​ ಪ್ರಶ್ನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!