spot_img
Saturday, February 14, 2026
spot_img

ಗೃಹಲಕ್ಷ್ಮೀ ಯೋಜನೆ : ಯೋಜನೆ ನಿಮ್ಮ ಬದುಕಿನಲ್ಲಿ ಉತ್ತಮ ಬದಲಾವಣೆ ತಂದಿದೆಯೇ ? ರೀಲ್ಸ್‌ ಮಾಡಿ ಹಂಚಿಕೊಳ್ಳಿ, ಬಹುಮಾನ ಪಡೆಯಿರಿ : ಲಕ್ಷ್ಮೀ ಹೆಬ್ಬಾಳ್ಕರ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಗೃಹಲಕ್ಷ್ಮಿʼ ಯೋಜನೆಯು ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಪ್ರಯೋಜನಗಳನ್ನು ನಮ್ಮೊಂದಿಗೆ ವಿಡಿಯೋ ರೀಲ್ಸ್ ಮೂಲಕ ಹಂಚಿಕೊಳ್ಳಬಹುದು ಎಂದು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್‌, “ಮನೆಯೊಡತಿಯರಿಗೆ / ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್‌ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಹ ರೀಲ್ಸ್‌ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!