Tuesday, September 17, 2024

ಕರಾವಳಿಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್‌ ಮಾಫಿಯ ನಿಯಂತ್ರಿಸುವಂತೆ ಗೃಹ ಸಚಿವರಿಗೆ ಮಂಜುನಾಥ ಭಂಡಾರಿ ಪತ್ರದ ಮೂಲಕ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು/ಉಡುಪಿ) : ಕರಾವಳಿ ಜಿಲ್ಲೆಗಳಲ್ಲಿ ದಿನೆ ದಿನೆ ಡ್ರಗ್ಸ್‌, ಗಾಂಜಾ ಹಾವಳಿ ಹೆಚ್ಚಾಗುತ್ತಿದ್ದು, ಈ ಡ್ರಗ್ಸ್‌, ಗಾಂಜಾ ಮಾಫಿಯಾಗಳನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿ ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಪತ್ರ ಬರೆದಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಹಳಲ್ಲಿ ಇತ್ತೀಚೆಗಿನ ದಿನಗಳಲ್ಲಿ ಅತ್ಯಾಚಾರ, ಮಾರಣಾಂತಿಕ ಹಲ್ಲೆ, ಕೊಲೆ, ದರೋಡೆ, ಡಕಾಯಿತಿ ಪ್ರಕರಣಗಳು ಏರಿಕೆಯಾಗುತ್ತಿರುವ ಬಗ್ಗೆ ನಿರಂತರವಾಗಿ ವರದಿಗಳಾಗುತ್ತಿರುವುದು ಆತಂಕಕಾರಿಯಾಗಿದೆ. ಡ್ರಗ್ಸ್‌/ಗಾಂಜಾದಂತಹ ಮಾದಕ ವ್ಯಸನದಿಂದಾಗಿ ಕರಾವಳಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಯುವಕರು ಮಾದಕ ವ್ಯಸನಗಳಿಂದಾಗಿ ಬಲಿಯಾಗುತ್ತಿದ್ದಾರೆ. ಇಸ್ಪೀಟು, ಮಟ್ಕಾ ಮುಂತಾದ ಕಾನೂನು ಬಾಹೀರ ಚಟುವಟಿಕೆ ಹಾವಳಿ ಹೆಚ್ಚಳವಾಗುತ್ತಿದೆ ಎಂದು ಆ.೨೯ ರಂದು ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಅವರು ಹೇಳಿದ್ದಾರೆ.

ಕರಾವಳಿ ಭಾಗದಲ್ಲಿ ಇಂತಹ ಕಾನೂನು ಚಟುವಟಿಕಗಳು ಹಾಗೂ ಅಪರಾಧ ಪ್ರಕರಣಗಳು ಪರಿಣಾಮಕಾರಿಯಾಗಿ ತಡೆಯಲು ಗೃಹ ಇಲಾಖೆ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ತುರ್ತು ಅಗತ್ಯ ನಿರ್ದೇಶನ ನೀಡಬೇಕು ಎಂದು ಪತ್ರದ ಮೂಲಕ ಅವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!