spot_img
Monday, March 24, 2025
spot_img

ಪಶ್ಚಿಮ ಬಂಗಾಳ : ಅತ್ಯಾಚಾರ ತಡೆ ಮಸೂದೆ ಸರ್ವಾನುಮತದಿಂದ ಅಂಗೀಕಾರ

ಜನಪ್ರತಿನಿಧಿ (ಕೊಲ್ಕತ್ತಾ ) : ಅತ್ಯಚಾರ ಹಾಗೂ ಕೊಲೆ ಎಸಗಿರುವ ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆ ಪ್ರಸ್ತಾಪಿಸಿರುವ ಅತ್ಯಾಚಾರ ತಡೆ ಮಸೂದೆಯನ್ನು ಪಶ್ಚಿಮ ಬಂಗಾಳದ ವಿಧಾನಸಭೆ ಇಂದು (ಮಂಗಳವಾರ) ಸರ್ವಾನುಮತದಿಂದ ಅಂಗೀಕರಿಸಿದೆ.

ಅಪರಾಜಿತ ಮಹಿಳೆ ಹಾಗೂ ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್‌ ಕಾನೂನು ಹಾಗೂ ತಿದ್ದುಪಡಿ ೨೦೨೪)ಯನ್ನು ವಿಪಕ್ಷಗಳ ಬೆಂಬಲದೊಂದಿಗೆ ಅಂಗೀಕರಿಸಲಾಗಿದೆ.

ಆದಾಗ್ಯೂ ಮಸೂದೆಯನ್ನು ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಮಂಡಿಸಿದ ಪ್ರಸ್ತಾವಿತ ತಿದ್ದುಪಡಿಗಳನ್ನು ಸದನವು ಅಂಗೀಕರಿಸಲಿಲ್ಲ.

ಆರೋಪಿಯು ಅತ್ಯಚಾರ ಹಾಗೂ ಸಾಮೂಹಿಕ ಅತ್ಯಾಚಾರ ಎಸಗಿದ್ದು ದೃಡಪಟ್ಟರೇ ಜೀವಾವಧಿ ಜೈಲುಶಿಕ್ಷೆ ವಿಧಿಸುವುದನ್ನು ಮಸೂದೆ ಒಳಗೊಂಡಿದೆ.

ಮಹಿಳೆಯರು ಹಾಗೂ ಮಕಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಪರಾಧ ʼಪೆರೋಲ್‌ʼ ಇಲ್ಲದೇ ಜೀವಾವಧಿ ಶಿಕ್ಷೆ ಇದು ಒಳಗೊಂಡಿದೆ.

ಕೋಲ್ಕತ್ತಾದ ಆರ್.‌ ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಘಟನೆ ಬಳಿಕ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಅತ್ಯಾಚಾರ, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮಸೂದೆ ಮಂಡಿಸುವುದಾಗಿ ಮಮತಾ ಬ್ಯಾನರ್ಜಿ ಅವರ ನೇತೃತ್ವದ ಸರ್ಕಾರ ಘೋಷಿಸಿತ್ತು. ಈ ಸಂಬಂಧ ಎರಡು ದಿನಗಳ ವಿಶೇಷ ಅಧಿವೇಶನವನ್ನೂ ಕರೆಯಲಾಗಿತ್ತು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!