spot_img
Wednesday, January 22, 2025
spot_img

ಕೊಲ್ಕತ್ತಾ ವೈದ್ಯ ಆತ್ಯಾಚಾರ ಪ್ರಕರಣ : ಮುಂದುವರಿದ ವೈದ್ಯರ ಪ್ರತಿಭಟನೆ

ಜನಪ್ರತಿನಿಧಿ (ಕೋಲ್ಕತ್ತಾ) : ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರ ಮುಷ್ಕರ ಪ್ರತಿಭಟನೆ ಇಂದೂ(ಬುಧವಾರ) ಮುಂದುವರಿದಿದೆ.

ಈಗ ಮೂರು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆ ಕಾರಣದಿಂದ ಹೆಚ್ಚಿನ ಸರ್ಕಾರಿ ವೈದ್ಯಕೀಯ ಸೌಲಭ್ಯಗಳಲ್ಲಿ ಆರೋಗ್ಯ ಸೇವೆಗಳು ದುರ್ಬಲಗೊಂಡಿವೆ. ನ್ಯಾಯಕ್ಕಾಗಿ ನಮ್ಮ ಬೇಡಿಕೆ ಇನ್ನೂ ಈಡೇರಿಲ್ಲ. ನಮ್ಮ ಸೋದರ-ಸೋದರಿಯರಿಗೆ ನ್ಯಾಯ ಸಿಗುವವರೆಗೆ ಹಾಗೂ ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸುವವರೆಗೆ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಕಿರಿಯ ವೈದ್ಯರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ರಾಜೀನಾಮೆ ನೀಡಿಲ್ಲ, ಇದು ಧರಣಿ ನಿರತ ವೈದ್ಯರ ಮತ್ತೊಂದು ಬೇಡಿಕೆಯಾಗಿದೆ ಎಂದರು.

ಆಗಸ್ಟ್ 9 ರಂದು ಯುವ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಹಸ್ತಾಂತರಿಸುವ ಮೊದಲು ಪೊಲೀಸರು ಅಸಮರ್ಪಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ನಗರದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯ ನಿರತ ಸ್ನಾತಕೋತ್ತರ ತರಬೇತಿ ವೈದ್ಯೆಯ ಶವ ಪತ್ತೆಯಾಗಿದೆ. ಈ ಘಟನೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣದಲ್ಲಿ ಅನೇಕ ಜನರನ್ನು ರಕ್ಷಿಸಲಾಗಿದೆ, ಘಟನೆ ಕುರಿತು ಸತ್ಯ ಹೊರಬರಬೇಕು ಎಂದು ಸರ್ಕಾರಿ ಆಸ್ಪತ್ರೆಯ ಮತ್ತೊಬ್ಬ ಕಿರಿಯ ವೈದ್ಯರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಟ್ರೇನಿ ವೈದ್ಯೆ ಶವ ಪತ್ತೆಯಾದ ಸ್ವಲ್ಪ ಸಮಯದ ನಂತರ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಯಿತು. ವೈದ್ಯಕೀಯ ಸಂಸ್ಥೆಯಲ್ಲಿ ಹಣಕಾಸಿನ ಅವ್ಯವಹಾರದ ಆರೋಪದಲ್ಲಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!