spot_img
Saturday, February 14, 2026
spot_img

ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ, ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರು : ಲಕ್ಷ್ಮೀ ಹೆಬ್ಬಾಳ್ಕರ್‌

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹೆಬ್ಬಾಳ್ಕರ್‌, 6 ತಿಂಗಳಿನಿಂದ 3 ವರ್ಷದ ಮಕ್ಕಳನ್ನು ಇಲ್ಲಿ ಪಾಲನೆ ಮಾಡಲಾಗುತ್ತದೆ. ಮನೆಗೆಲಸ, ಕಾರ್ಖಾನೆ, ಇತರ ಕೆಲಸಗಳಿಗೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಈ ಕೇಂದ್ರಗಳಲ್ಲಿ ಬಿಟ್ಟು ಹೋಗಬಹುದು ಎಂದು ತಿಳಿಸಿದ್ದಾರೆ.

ಇನ್ನು, ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಕೂಡ ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!