Sunday, October 13, 2024

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌, ಪವಿತ್ರಾ ಗ್ಯಾಂಗ್‌ನ ಕ್ರೌರ್ಯ ಬಟಾಬಯಲು !

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ಹೊರ ಬಂದಿದ್ದು, ಆರೋಪಿ ನಟ ದರ್ಶನ್‌ ಹಾಗೂ ಅವರ ಆಪ್ತೆ ಆರೋಪಿ ಪೊವಿತ್ರಾ ಗೌಡ ಹಾಗೂ ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಎಸಗಿದ್ದು, ಅದದ ಫೋಟೋಗಳು ದತ್ತಾಂಶ ಸಂಗ್ರಹದ ಸಂದರ್ಭದಲ್ಲಿ ಲಭ್ಯವಾಗಿವೆ. ಆರೋಪಿಗಳು ಎಸಗಿರುವ ಕ್ರೌರ್ಯ ಬಯಲಾಗಿದೆ.

ದೋಷಾರೋಪ ಪಟ್ಟಿ ಸಲ್ಲಿಕೆಯಾದ ಮರುದಿನವೇ ಈ ವಿಚಾರ ಬೆಳಕಿಗೆ ಬಂದಿದೆ. ರೇಣುಕಾಸ್ವಾಮಿ ಆರೋಪಿಗಳು ಕೌರ್ಯ ಎಸಗುತ್ತಿರುವ ವೇಳೆ ರೇಣುಕಾಸ್ವಾಮಿ ಕೈ ಮುಗಿದು ಬೇಡಿಕೊಳ್ಳುತ್ತಿರುವ ಹಾಗೂ ನಿತ್ರಾಣಗಿಂಡಯ ಅಂಗಾತ ಮಲಗಿರುವ ಫೋಟೋಗಳು ಲಭ್ಯವಾಗಿದೆ.

ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಅನೇಕ ಅವರ ಸಂಗಡರ ವಿರುದ್ಧ ಪ್ರಬಲ ಸಾಕ್ಷಿ ದೊರಕಿದಂತಾಗಿದೆ.

ಪಟ್ಟಣಗೆರೆ ಶೆಡ್‌ನಲ್ಲಿ ಕೊಲೆ ಮಾಡುವ ವೇಳೆ ತೆಗೆದ ಫೋಟೋ ಇದಾಗಿವೆ. ಮೈಮೇಲೆ ಗಾಯದ ಗುರುತುಗಳಿವೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಇನ್ನು ಮುಂದೆ ಪವಿತ್ರಾಗೆ ಸಂದೇಶ ಕಳುಹಿಸುವುದಿಲ್ಲ. ತಪ್ಪಾಯಿತು ಬಿಡಿ ಎಂದು ಬೇಡಿಕೊಂಡರೂ ಆರೋಪಿಗಳು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಅಂಶಗಳನ್ನೂ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆಂದು ಮೂಲಗಳು ಹೇಳಿವೆ.

ಕೃತ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಆರೋಪಿ ಪವಿತ್ರಾ ಗೌಡ ಅವರ ವ್ಯವಸ್ಥಾಪಕ ಕೆ. ಪವನ್‌ ಫೋಟೋ ಕ್ಲಿಕ್ಕಿಸಿ ಅದನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ ಮಾಲೀಕ ವಿನಯ್‌ ಹಾಗೂ ದರ್ಶನ್‌ ಆಪ್ತ, ಸಾಫ್ಟ್ವೇರ್‌ ಇಂಜಿನಿಯರ್‌ ಪ್ರದೂಷ್‌ ಅವರ ಐಫೋನ್‌ಗೆ ಕಳುಹಿಸಿದ್ದರು ಎನ್ನುವ ವಿಚಾರ ತಿಳಿದು ಬಂದಿದೆ. ರೇಣುಕಾಸ್ವಾಮಿ ಮೃತಪಟ್ಟ ನಂತರ ಫೋಟೋ ಡಿಲೀಟ್‌ ಮಾಡಿ ಸಾಕ್ಷ್ಯ ನಾಶ ಮಾಡಿದ್ದು, ದತ್ತಾಂಶ ಮರು ಸಂಗ್ರಹದ ವೇಳೆ ಆ ಫೋಟೋ ಈಗ ಲಭ್ಯವಾಗಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!