Sunday, October 13, 2024

ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮಂಜುನಾಥ ಭಂಡಾರಿ ಭೇಟಿ

ಕುಂದಾಪುರ: ಕರ್ಕುಂಜೆ ಸಹಕಾರಿ ವ್ಯವಸಾಯಿಕ ಸಂಘದ ನೂತನ ಕಟ್ಟಡ ಬಾಂಡ್ಯ ಕೆ.ಸುಧಾಕರ ಶೆಟ್ಟಿ ಸಹಕಾರಿ ಸದನಕ್ಕೆ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಭೇಟಿ ನೀಡಿದರು.

ಸುಮಾರು ಎರಡುವರೆ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣಗೊಂಡ 10 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು ವೀಕ್ಷಿಸಿ ಸಂಘದ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಸಂಘದ ಅಧ್ಯಕ್ಷರಾದ ಬಾಂಡ್ಯ ಸುಧಾಕರ ಶೆಟ್ಟಿ ಬರಮಾಡಿಕೊಂಡು ಸಂಘವು ಬೆಳೆದು ಬಂದ ದಾರಿಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಎಸ್.ರಾಜು ಪೂಜಾರಿ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ವಕೀಲರಾದ ಪ್ರಸನ್ನಕುಮಾರ್ ಶೆಟ್ಟಿ ಕೆರಾಡಿ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷರಾದ ಬಿಜ್ರಿ ರಾಜೀವ ಶೆಟ್ಟಿ, ನಿರ್ದೇಶಕರಾದ ವಿವೇಕಾನಂದ ಭಂಡಾರಿ, ಮಹಮ್ಮದ್ ಸಾಹೇಬ್, ಸಂತೋಷ್ ಪೂಜಾರಿ, ಗೋಪಾಲ ಶೆಟ್ಟಿ, ಸುಲೋಚನ್ ದಾಸ್ ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಭಾಶ್ಚಂದ್ರ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!