Saturday, October 12, 2024

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಶಿಕ್ಷಕರ ದಿನಾಚರಣೆ

ತೆಕ್ಕಟ್ಟೆ: ಸೆ5ರಂದು ವಿಶ್ವವಿನಾಯಕ ಸಿಬಿ‌ಎಸ್‌ಇ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಆಡಳಿತ ನಿರ್ದೇಶಕ ಎಮ್. ಪ್ರಭಾಕರ ಶೆಟ್ಟಿಯವರು ಡಾ.ಸರ್ವಪಲ್ಲಿ ರಾಧಾ ಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು, ಶಿಕ್ಷಕರ ಜವಾಬ್ದಾರಿಯುತ ಸೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲವಾಗಿದೆ ಎಂದು ತಿಳಿಸಿದರು.

ಶಾಲಾ ಶೈಕ್ಷಣಿಕ ನಿರ್ದೇಶಕರು ಮಾತನಾಡಿ ಗುರು ಹಿರಿಯರಿಗೆ ಗೌರವ ಸಲ್ಲಿಸಿ ಮುನ್ನಡೆದರೆ ಯಶಸ್ಸು ಗಳಿಸಬಹುದು ಎಂದು ತಿಳಿಸಿದರು.

ಪ್ರಾಂಶುಪಾಲರಾದ ನಿತಿನ್ ಡಿ ಆಲ್ಮೇಡಾರವರು ಮಾತನಾಡಿ ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದು ಸತ್ಪ್ರಜೆಗಳಾಗಿ ದೇಶ ನಿರ್ಮಾಣ ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು ಎಂದು ತಿಳಿಸಿದರು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ವಿದ್ಯಾರ್ಥಿಗಳಾದ ಡಿ. ಸಾನ್ವಿ ಸ್ವಾಗತಿಸಿದರು, ಇಂಪನಾ ಕಾರ್ಯಕ್ರಮ ನಿರೂಪಿಸಿದರು, ಪ್ರಣೀತಾ ವಂದಿಸಿದರು, ಶಿಕ್ಷಕಿಯರಾದ ಜಯಶ್ರೀ ಶೆಟ್ಟಿ, ನಾಗರತ್ನ ಹೆಬ್ಬಾರ್ ಹಾಗೂ ಜ್ಯೋತಿ ಕಾರ್ಯಕ್ರಮ ಸಂಘಟಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!