Sunday, October 13, 2024

ಕ್ರಿಕೆಟಿಗ ರವೀಂದ್ರ ಜಡೇಜಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ !

ಜನಪ್ರತಿನಿಧಿ (ನವ ದೆಹಲಿ) : ಕ್ರಿಕೆಟಿಗ, ಎಡಗೈ ಸ್ಪಿನ್ಸರ್‌ ರವೀಂದ್ರ ಜಡೇಜಾ ಅವರು ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರ್ಪಡೆಗೊಂಡಿದ್ದಾರೆ ಎಂದು ಅವರ ಪತ್ನಿ ಮತ್ತು ಶಾಸಕಿ ರಿವಾಬಾ ಜಡೇಜಾ ಅವರು ಮಾಹಿತಿ ನೀಡಿದ್ದಾರೆ.

ಇಂದು(ಶುಕ್ರವಾರ) ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ ರಿವಾಬಾ ಜಡೇಜಾ, ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಪಡೆದ ಕಾರ್ಡ್‌ನ ಫೋಟೋಗಳನ್ನು “ಸದಾಸ್ಯತ ಅಭಿಯಾನ 2024” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಆರಂಭಿಸಿದ ಸದಸ್ಯತ್ವ ಅಭಿಯಾನ ಭಾಗವಾಗಿ ಜಡೇಜಾ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ರಿವಾಬಾ ಜಡೇಜಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಈ ವರ್ಷ ಕಳೆದ ಜೂನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ T20 ವಿಶ್ವಕಪ್ ವಿಜಯದ ಬಳಿಕ ಭಾರತದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು T20 ಅಂತರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದರು. ಸದ್ಯ ಈಗ ಬಿಜೆಪಿ ಸೇರುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ರಿವಾಬಾ 2019ರಲ್ಲಿ ಬಿಜೆಪಿ ಪಕ್ಷವನ್ನು ಸೇರಿದ್ದರು. 2022 ರ ವಿಧಾನಸಭಾ ಚುನಾವಣೆಯಲ್ಲಿ ಜಾಮ್‌ನಗರ್ ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿದು ಆಪ್ ಅಭ್ಯರ್ಥಿ ಕರ್ಶನ್‌ಬಾಯ್ ಕಾರ್ಮುರ್ ರವರನ್ನು ಸೋಲಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!