Saturday, October 12, 2024

ಗಣೇಶ ಹಬ್ಬ: ಮಧ್ಯಮಾರಾಟ ನಿಷೇಧ

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು ೧೯೬೮ ರ ನಿಯಮ ೩ ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ ಕಲಂ ೨೧ ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ ೭ ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ ೯ ಮತ್ತು ಸೆಪ್ಟೆಂಬರ್ ೧೧ ರಂದು ಮದ್ಯ ಮಾರಾಟವನ್ನು ಬೆಳಿಗ್ಗೆ ೬ ರಿಂದ ಮದ್ಯರಾತ್ರಿ ೧೨.೦೦ ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!