Sunday, October 13, 2024

ಮುಡಾ ಪ್ರಕರಣ : ಬಿಜೆಪಿ ತನ್ನ ನಿಲುವಿನ ಬಗ್ಗೆ ವಿಷಾದ ವ್ಯಕ್ತಪಡಿಸಲಿದೆ : ಸಚಿವ ಎಂ ಬಿ ಪಾಟೀಲ್‌

ಜನಪ್ರತಿನಿಧಿ (ವಿಜಯಪುರ): ವಿವಾದಿತ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಬಿಜೆಪಿಗೆ ಖಡಕ್‌ ತಿರುಗೇಟು ನೀಡಿದ್ದು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ನಿಲುವಿನ ಬಗ್ಗೆ ಬಿಜೆಪಿ ವಿಷಾದ ವ್ಯಕ್ತಪಡಿಸಲಿದೆ ಎಂದು ಅವರು ಹೇಳಿದ್ದಾರೆ.

ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧ ಬಿಜೆಪಿ ತನ್ನ ನಿಲುವಿಗೆ ವಿಷಾದ ವ್ಯಕ್ತಪಡಿಸಲಿದೆ. ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ತೀರ್ಪು ಬರಲಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಪಕ್ಷ ಒಡೆದಿದೆ ಎಂಬ ಬಿಜೆಪಿಯ ಮಾತು ಸತ್ಯಕ್ಕೆ ದೂರವಾದದದ್ದು, ನಾವೆಲ್ಲರೂ ಒಗ್ಟಟ್ಟಿನಿಂದ ಇದ್ದೇವೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಒಳಗೊಂಡು ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರ ನಾಯಕತ್ವವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆಂದು ಹೇಳಿದರು.

ನಾಯಕತ್ವ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಪುನರುಚ್ಛರಿಸಿದರು.

ಇದೇ ಸಂದರ್ಭದಲ್ಲಿ ದೆಹಲಿ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಅವರು, ದೆಹಲಿ ಭೇಟಿ ಯಾವುದೇ ರಾಜಕೀಯ ಉದ್ದೇಶಗಳನ್ನು ಹೊಂದಿರಲಿಲ್ಲ. ಕೇಂದ್ರ ಸಚಿವರನ್ನು ಭೇಟಿಯಾಗುವ ಸಲುವಾಗಿ ದೆಹಲಿಗೆ ತೆರಳಿದ್ದೆ. ದೆಹಲಿಗೆ ಹೋದರೇನು ಸಮಸ್ಯೆ? ಕೇಂದ್ರ ಸಚಿವರನ್ನು ಭೇಟಿ ಮಾಡಲು ನಾನು ಅಲ್ಲಿಗೆ ಹೋಗಿದ್ದೆ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!