Sunday, October 13, 2024

ವಿಕಸಿತ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಸದಸ್ಯತ್ವ ಅಭಿಯಾನದದಲ್ಲಿ ಪಾಲ್ಗೊಳ್ಳಿ- ಶಾಸಕ ಕಿರಣ್ ಕೊಡ್ಗಿ

ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಮಹಾಶಕ್ತಿ ಕೇಂದ್ರದ ಮಣೂರು ಹಾಗೂ ಗಿಳಿಯಾರು ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಇಂದು ಭಾನುವಾರ ಮಣೂರು ಮಹಾಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಸದಸ್ಯತ್ವ ಕಾರ್ಯಗಾರದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಪ್ರತಿ ಆರು ವರ್ಷಗಳಿಗೊಮ್ಮೆ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದ್ದು ಮೊಬೈಲ್ ಸಂಖ್ಯೆ 8800002024ಗೆ ಮಿಸ್ಡ್ ಕಾಲ್ ಮಾಡುವ ಮೂಲಕ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ನಿರ್ಮಾಣದ ಸಂಕಲ್ಪ ಮಾಡಿದ್ದು ಇದರ ಉದ್ದೇಶದಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಕೈಗೊಳ್ಳಲಾಗಿದೆ. ಇದನ್ನು ಸಾಕಾರಗೊಳಿಸಲು ಈ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಕುಂದಾಪುರ ಮಂಡಲದ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿಯವರು ಪ್ರತಿ ಬೂತ್ ನಲ್ಲಿ 400 ಜನರ ಸದಸ್ಯತ್ವ ನೋಂದಾವಣಿಗೆ ಪಕ್ಷ ಗುರಿ ನೀಡಿದ್ದು ಕಾರ್ಯಕರ್ತರು ಪದಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಪಕ್ಷದ ಸದಸ್ಯತ್ವ ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಮಿಸ್ಡ್ ಕಾಲ್ ನೀಡುವುದರ ಮುಖಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಭಿಯಾನದ ಈ ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ.ಎಸ್, ಗಿಳಿಯಾರು ಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ದೇವಾಡಿಗ, ಮಣೂರು ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಹೊಳ್ಳ, ಕೋಟ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷ ಪಾಂಡು ಪೂಜಾರಿ, ಹಾಗೂ ಈ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು, ಶಕ್ತಿ ಕೇಂದ್ರದ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!