spot_img
Wednesday, April 1, 2026
spot_img

ಮುಖ್ಯಮಂತ್ರಿ ಪ್ರತಿಕೃತಿ ದಹಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್‌ ದಾಖಲು !

ಜನಪ್ರತಿನಿಧಿ (ಉಡುಪಿ / ಮಣಿಪಾಲ) : ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಇಂದು(ಸೋಮವಾರ) ಮಾಹಿತಿ ನೀಡಿದ್ದಾರೆ.

ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಿ ಹಿಂಪಡೆದಿರುವುದನ್ನು ವಿರೋಧಿಸಿ ಮನವಿ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಸೆ.6 ರಂದು ಸಿಂಡಿಕೇಟ್ ವೃತ್ತದಲ್ಲಿ ಜಮಾಯಿಸಿದ್ದ ಕೆಲವು ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ಹಾಗೂ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಕೃತಿ ದಹಿಸಿದ್ದರು.

ಈ ಸಂದರ್ಭದಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನೆ ನಡೆಸದಂತೆ ತಡೆದರು. ಆದಾಗ್ಯೂ, ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪಾಲದಲ್ಲಿ ಸಭೆ, ಮೆರವಣಿಗೆ ನಡೆಸಲು ಬಿಜೆಪಿ ಕಾರ್ಯಕರ್ತರು ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕವಾಗಿ ಕೃತ್ಯವೆಸಗಿದ ಆರೋಪದಲ್ಲಿ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹಾಗೂ ಗಿರೀಶ್ ಅಂಚನ್ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!