Saturday, October 12, 2024

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ & ಗ್ಯಾಂಗ್‌ ನ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ !

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ ಮತ್ತು ತಂಡದ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಇಂದು(ಸೋಮವಾರ) ಆದೇಶಿಸಿದೆ.

ನಟ ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.12ರ ವರೆಗೆ ವಿಸ್ತರಿಸಿ ಕೋರ್ಟ್‌ ಆದೇಶಿಸಿದೆ.

ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅಷ್ಟಲ್ಲದೇ, ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲಿನಲ್ಲಿರುವ ಆರೋಪಿಗಳು ಎಲ್ಲರೂ ವಿಚಾರಣೆಗೆ ಹಾಜರಾದರು.

ದರ್ಶನ್​ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ಸೆಪ್ಟೆಂಬರ್ 12ರಂದು ಮತ್ತೆ ಕೋರ್ಟ್‌ ಮುಂದೆ ಮತ್ತೆ ಹಾಜರಾಗಬೇಕಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!