Saturday, October 12, 2024

ನಾಳೆ ಸಂಜೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ : ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ʼಸುಪ್ರೀಂʼ ಎಚ್ಚರಿಕೆ !

ಜನಪ್ರತಿನಿಧಿ (ನವ ದೆಹಲಿ) : ಪಶ್ಚಿಮ ಬಂಗಾಳದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಿರತರಾಗಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ(ಮಂಗಳವಾರ) ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಲ್ಲದೇ, ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ಸರ್ವೋಚ್ಛ ನ್ಯಾಯಾಲಯ ಎಚ್ಚರಿಸಿದೆ.

ಸಿಜೆಐ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ, ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ತ್ರಿಸದಸ್ಯ ನ್ಯಾಯಪೀಠ, ಕಿರಿಯ ವೈದ್ಯರು ಹಾಗೂ ಪಶ್ಚಿಮ ಬಂಗಾಳ ಸರ್ಕಾರದ ಕುಂದುಕೊರತೆಗಳನ್ನು ಪರಿಗಣಿಸಿ ಆದೇಶ ಹೊರಡಿಸಿದ್ದಾರೆ.

ಕಿರಿಯ ವೈದ್ಯರು ನಾಳೆ ಸಂಜೆ 5 ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು. ಅಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ವೈದ್ಯರು ಕರ್ತವ್ಯಕ್ಕೆ ಒಂದು ವೇಳೆ ಮರಳದಿದ್ದರೆ, ರಾಜ್ಯ ಸರ್ಕಾರವು ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅವರು ಕೆಲಸಕ್ಕೆ ಮರಳಿದರೆ, ಯಾವುದೇ ದಂಡನಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದೆ.

ಪಶ್ಚಿಮ ಬಂಗಾಳ ಸರ್ಕಾರ ವೈದ್ಯರ ಸುರಕ್ಷತೆಗೆ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ನ್ಯಾಯಾಲಯ ಒತ್ತಿಹೇಳಿದೆ. ಪ್ರತ್ಯೇಕ ಕರ್ತವ್ಯ ಕೊಠಡಿ, ವ್ಯವಸ್ಥಿತ ಶೌಚಾಲಯ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಒಳಗೊಂಡು ವೈದ್ಯರ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಪರಿಹರಿಸಬೇಕು. ಪುರುಷ ಮತ್ತು ಮಹಿಳಾ ವೈದ್ಯರಿಗೆ ವಿಶ್ರಾಂತಿ ಕೊಠಡಿಗಳನ್ನು ಸ್ಥಾಪಿಸುವುದು ಮತ್ತು ಸಿಸಿಟಿವಿಗಳನ್ನು ಅಳವಡಿಸುವುದು ಇದರಲ್ಲಿ ಸೇರಿದೆ. ಹೆಚ್ಚುವರಿ ಸಿಸಿಟಿವಿಗಳಿಗೆ ಹಣವನ್ನು ನಿಗದಿಪಡಿಸಲಾಗಿದೆ ಎಂದು ರಾಜ್ಯ ಪೊಲೀಸ್ ಅಫಿಡವಿಟ್ ದೃಢಪಡಿಸಬೇಕು. ಇದನ್ನು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿರಬೇಕು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!